Operation Sindoor | ಕಾಶ್ಮೀರದಿಂದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತವಾಗಿ ವಾಪಸ್
x

ಕಾಶ್ಮೀರದಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಯಿತು

Operation Sindoor | ಕಾಶ್ಮೀರದಿಂದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತವಾಗಿ ವಾಪಸ್

ವಿಶೇಷ ರೈಲಿನಲ್ಲಿ ನವದೆಹಲಿಗೆ ಬಂದ ವಿದ್ಯಾರ್ಥಿಗಳನ್ನು ಕರ್ನಾಟಕ ಭವನ -2 ರಲ್ಲಿ ಇರಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಿಕಟ ಮೇಲ್ವಿಚಾರಣೆಯಲ್ಲಿ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವಾಲಯವು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರಲಾಯಿತು.


ಶ್ರೀನಗರದ ಶೇರ್-ಎ-ಕಾಶ್ಮೀರ ಕೃಷಿ ವಿಜ್ಞಾನ ಹಾಗೂ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳನ್ನು ಭಾನುವಾರ ಸುರಕ್ಷಿತವಾಗಿ ವಾಪಸಾಗಿದ್ದಾರೆ.

ವಿಶೇಷ ರೈಲಿನಲ್ಲಿ ನವದೆಹಲಿಗೆ ಬಂದ ವಿದ್ಯಾರ್ಥಿಗಳನ್ನು ಕರ್ನಾಟಕ ಭವನ -2 ರಲ್ಲಿ ಇರಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಿಕಟ ಮೇಲ್ವಿಚಾರಣೆಯಲ್ಲಿ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವಾಲಯವು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರಲಾಯಿತು.

ಪ್ರಯಾಣದ ಪ್ರತಿ ಹಂತದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನಿಕಟ ಮೇಲ್ವಿಚಾರಣೆ ಮಾಡಿದರು. ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವಾಲಯದ ಅಧಿಕಾರಿಗಳು ಬರಮಾಡಿಕೊಂಡು ವೈಯಕ್ತಿಕವಾಗಿ ಬೆಂಗಾವಲು ನೀಡಿದರು.

“ಇಂತಹ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವು ಸ್ಪೂರ್ತಿದಾಯಕ ಮತ್ತು ಧೈರ್ಯ ತುಂಬುವಂತಿದೆ. ಅವರ ಸ್ಪಷ್ಟ ಸೂಚನೆಗಳು ಮತ್ತು ಪ್ರತಿಯೊಬ್ಬ ನಾಗರಿಕರ ಕಲ್ಯಾಣಕ್ಕೆ ಆಳವಾದ ಬದ್ಧತೆ ತೋರಿಸುತ್ತದೆ. ಇಲಾಖೆಗಳ ನಡುವೆ ತ್ವರಿತ ಸಮನ್ವಯವನ್ನು ಸಾಧ್ಯವಾಗಿಸಿದೆ. ನಿಖರತೆ ಮತ್ತು ಸಹಾನುಭೂತಿಯಿಂದ ಕಾರ್ಯನಿರ್ವಹಿಸಿದ ಭದ್ರತಾ ಸಂಸ್ಥೆಗಳು, ರೈಲ್ವೆ ಸಿಬ್ಬಂದಿ ಮತ್ತು ಸಚಿವಾಲಯದ ಅಧಿಕಾರಿಗಳನ್ನು ಶ್ಲಾಘಿಸುತ್ತೇನೆ'' ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಕಾಶ್ಮೀರದಿಂದ ಸುರಕ್ಷಿತವಾಗಿ ಮರಳಿದ ವಿದ್ಯಾರ್ಥಿ ಹರ್ಷಿತ್ ಮಾತನಾಡಿ, "ಕಾಶ್ಮೀರದಲ್ಲಿ ಉದ್ವಿಗ್ನತೆ ಹೆಚ್ಚಾದಾಗ ನಾವು ಆತಂಕಕ್ಕೊಳಗಾಗಿದ್ದೆವು. ಆದರೆ ಭಾರತ ಸರ್ಕಾರದ ತ್ವರಿತ ಪ್ರತಿಕ್ರಿಯೆ ಎಲ್ಲವೂ ಬದಲಿಸಿತು. ಪ್ರತಿ ಹಂತದಲ್ಲಿ ಸರ್ಕಾರದ ಸೂಚನೆಯಂತೆ ಎಚ್ಚರಿಕೆ ವಹಿಸಿದ್ದೆವು. ಪ್ರಧಾನಿ ಮೋದಿಯವರ ನಿರ್ಣಾಯಕ ನಾಯಕತ್ವಕ್ಕಾಗಿ ನಾವು ಧನ್ಯವಾದ ಅರ್ಪಿಸುತ್ತೇವೆ'' ಎಂದು ತಿಳಿಸಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿನಿ ಭಾಗ್ಯಶ್ರೀ ಪ್ರಸಾದ್ ಮಾತನಾಡಿ, "ಕಷ್ಟದ ಸಮಯದಲ್ಲಿ ನಮ್ಮೊಂದಿಗೆ ನಿಂತಿದ್ದಕ್ಕಾಗಿ ಪ್ರಧಾನಮಂತ್ರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ತುಂಬಾ ಗಂಭೀರವಾಗಿ ಪರಿಗಣಿಸಿರುವುದಕ್ಕೆ ಹೆಮ್ಮೆ ಪಡುತ್ತೇವೆ. ವಿಶೇಷವಾಗಿ ಎಚ್.ಡಿ. ಕುಮಾರಸ್ವಾಮಿ ಅವರು ವೈಯಕ್ತಿಕವಾಗಿ ಮುತುವರ್ಜಿ ವಹಿಸಿ ಪ್ರಯಾಣದ ಉದ್ದಕ್ಕೂ ಪ್ರೋತ್ಸಾಹ, ಧೈರ್ಯ ತುಂಬಿದ್ದಾರೆ" ಎಂದು ಹೇಳಿದ್ದಾರೆ

Read More
Next Story