ರಾಜ್ಯದಲ್ಲಿ 14 ಲಕ್ಷ ಅನರ್ಹ ಪಡಿತರ ಚೀಟಿಗಳು: ಸಚಿವ ಕೆ ಎಚ್‌ ಮುನಿಯಪ್ಪ
x
ರೇಶನ್‌ ಕಾರ್ಡ್‌

ರಾಜ್ಯದಲ್ಲಿ 14 ಲಕ್ಷ ಅನರ್ಹ ಪಡಿತರ ಚೀಟಿಗಳು: ಸಚಿವ ಕೆ ಎಚ್‌ ಮುನಿಯಪ್ಪ

ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ಬ್ಯಾಂಕ್ ವರ್ಗಾವಣೆ (ಡಿಬಿಟಿ) ಮುಂದುವರಿಯುತ್ತದೆ. ರಾಜ್ಯಕ್ಕೆ ಕೆಜಿಗೆ 28 ರೂ. ದರದಲ್ಲಿ ಅಕ್ಕಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.


Click the Play button to hear this message in audio format

ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಇಲಾಖೆ ಗುರುತಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಸೋಮವಾರ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಮುನಿಯಪ್ಪ, ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ 4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಚೀಟಿ ಮೂಲಕ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. 6 ತಿಂಗಳವರೆಗೆ ಪಡಿತರ ಪಡೆಯದಿರುವವರು ಒಂದು ವರ್ಷದವರೆಗೆ ಡಿಬಿಟಿ ಪಡೆಯದಿರುವವರು ಮತ್ತು ನಿಗದಿತಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರು ಅನರ್ಹರೆಂದು ಪರಿಗಣಿಸಲ್ಪಟ್ಟಿರುವುದರಿಂದ ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಅಂದಾಜಿಲಾಗಿದೆ ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಫಲಾನುಭವಿಗಳು ಅನರ್ಹ ಕಾರ್ಡ್‌ಗಳ ಸಂಖ್ಯೆಗಳಂತೆಯೇ ಹೊಸ ಕಾರ್ಡ್‌ಗಳನ್ನು ಪಡೆಯಲು ಹೊಸ ಅರ್ಜಿಗಳನ್ನು ಸಲ್ಲಿಸಲು ಆಹ್ವಾನಿಸಲಾಗುತ್ತದೆ. ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ಬ್ಯಾಂಕ್ ವರ್ಗಾವಣೆ (ಡಿಬಿಟಿ) ಮುಂದುವರಿಯುತ್ತದೆ. ರಾಜ್ಯಕ್ಕೆ ಕೆಜಿಗೆ 28 ರೂ. ದರದಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹೆಚ್ಚುವರಿ ಕಾರ್ಡ್‌ಗಳಿಗೆ ಅಗತ್ಯವಿರುವ ಹೆಚ್ಚುವರಿ 20,000 MT ಅಕ್ಕಿಯನ್ನು ರಾಜ್ಯವು ಸಂಗ್ರಹಿಸುತ್ತದೆ ಎಂದು ಅವರು ಹೇಳಿದರು.

2023-24ರಲ್ಲಿ ಕರ್ನಾಟಕಕ್ಕೆ ವಾರ್ಷಿಕ 27.48 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಕೆಜಿಗೆ 34.6 ರೂಪಾಯಿಗೆ ನೀಡಲು ಕೇಂದ್ರ ನಿರಾರಿಸಿತ್ತು. ಆಗ ರಾಜ್ಯ ಸರ್ಕಾರ ತನ್ನ ಚುನಾವಣಾ ಪೂರ್ವ ಭರವಸೆಯಂತೆ 5 ಕೆಜಿ ಅಕ್ಕಿ ಬದಲಿಗೆ 170 ರೂಪಾಯಿ ನೀಡಲು ನಿರ್ಧರಿಸಲಾಗಿತ್ತು. ಹೋಟೆಲ್, ಸಮುದಾಯ ಭವನಗಳಲ್ಲಿ ಆಹಾರ ಪೋಲು ಮಾಡುವುದನ್ನು ತಡೆಯಲು ಕಾನೂನು ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Read More
Next Story