
Karnataka Budget 2025 | 16ನೇ ಆಯವ್ಯಯ ಮಂಡನೆ; ಬಜೆಟ್‌ಗೆ ಸಚಿವ ಸಂಪುಟ ಅನುಮೋದನೆ
ಬಜೆಟ್ ಮಂಡನೆಗೂ ಮುನ್ನ 9.45 ಕ್ಕೆ ಸಚಿವ ಸಂಪುಟ ಸಭೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ಗೆ ಅನುಮೋದನೆ ಪಡೆದಿದ್ದಾರೆ. ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.
2025-26ನೇ ಸಾಲಿನ ಆಯವ್ಯಯ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಕಾಲ ಆರಂಭಕ್ಕೂ ಮುನ್ನ ಬೆಳಿಗ್ಗೆ10.15ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ 9.45 ಕ್ಕೆ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್‌ಗೆ ಅನುಮೋದನೆ ದೊರೆತಿದೆ. ಇದಕ್ಕ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.
ಕಳೆದ ಬಾರಿ ಮಂಡಿಸಿದ್ದ 3.75ಲಕ್ಷ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ. ಮೀರಬಹುದು ಎಂದು ಅಂದಾಜಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹಂಚಿಕೆ ನಡುವೆಯೇ ಹೊಸ ಘೋಷಣೆಗಳ ಕುರಿತು ನಿರೀಕ್ಷೆ ಹೆಚ್ಚಿಸಿದೆ.
ಮೇಕೆದಾಟು ಯೋಜನೆಗೆ ಇರುವ ಅಡೆತಡೆ ನಿವಾರಣೆಗೆ ಕ್ರಮ ಕೈಗೊಳ್ಳುವ ಕುರಿತು ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ಕೃಷ್ಣ ಮೇಲ್ದಂಡೆ ಯೋಜನೆ, ಕಳಸಾ-ಬಂಡೂರಿ ಯೋಜನೆಗೆ ಅನುದಾನ ಹಂಚಿಕೆ, ಜಲ ಸಂಪನ್ಮೂಲ ನಿಯಂತ್ರಣ ಪ್ರಾಧಿಕಾರ ರಚನೆ, ಜಲಸಂಪನ್ಮೂಲ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.