ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆ ಸಾವು; ತನಿಖೆಗೆ ಈಶ್ವರ ಖಂಡ್ರೆ ಆದೇಶ
x

ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆ ಸಾವು; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.


ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ.

Read More
Next Story