SSLC EXAMS | ನಕಲು ಮಾಡಲು ಸಹಕಾರ: ಇಬ್ಬರು ಶಿಕ್ಷಕರ ಅಮಾನತು
ಶನಿವಾರ ನಡೆದ ಎಸ್‌ಎಸ್‌ಎಲ್ ಸಿ ವಿಜ್ಞಾನ ಪರೀಕ್ಷೆಯಲ್ಲಿ ನಕಲು ಮಾಡಲು ಶಿಕ್ಷಕರು ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದ್ದು, ನಕಲು ಮಾಡುತ್ತಿದ್ದ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ಶನಿವಾರ ನಡೆದ ಎಸ್‌ಎಸ್‌ಎಲ್ ಸಿ ವಿಜ್ಞಾನ ಪರೀಕ್ಷೆಯಲ್ಲಿ ನಕಲು ಮಾಡಲು ಶಿಕ್ಷಕರು ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಪಿ.ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ ಮತ್ತು ಕೊರ್ಲಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಕಾಶ್ ಅಮಾನತುಗೊಂಡ ಶಿಕ್ಷಕರು.
ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಲು ಸಹಕರಿಸಿದ ಆರೋಪ ಈ ಇಬ್ಬರು ಶಿಕ್ಷಕರ ಮೇಲಿದೆ.
ಇನ್ನು ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯಲೋಪ ಎಸಗಿದ ಚಳ್ಳಕೆರೆಯ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರೇವಣ್ಣ ಮತ್ತು ಮತ್ತೋರ್ವ ಶಿಕ್ಷಕ ರಾಘವೇಂದ್ರ ಅವರ ವಿರುದ್ಧವೂ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಬಾಗಲಕೋಟೆ ಜಿಲ್ಲೆ ಬೀಳಿಗಿ ಖಾಸಗಿ ಶಾಲೆಯ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.