ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪರಿಶಿಷ್ಟರಿಗೆ ಶೇ.24 ಮೀಸಲು
x
ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪರಿಶಿಷ್ಟರಿಗೆ ಶೇ.24 ಮೀಸಲು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು.


ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಮಾದರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಸಮುದಾಯಗಳಿಗೆ ಶೇ 24.1 ಮೀಸಲಾತಿಯನ್ನು ದೇಶದಾದ್ಯಂತ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ವಿವಿಧ ಪಕ್ಷಗಳ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡು ಅವರು ಮಾತನಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಜತೆಗೂ ಮಾತನಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಎನ್ಇಪಿ , ಪಿಎಸ್‌ಪಿ ಕಾಯ್ದೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಜನಸಂಖ್ಯೆಗೆ ಅನುಗುಣವಾಗಿ ಆಯಾ ಸಮುದಾಯಗಳಿಗೆ ಅನುದಾನ ಖರ್ಚಾಗಬೇಕು ಎಂಬುದು ಇದರ ಉದ್ದೇಶ. ಆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಲೇ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ಸಮುದಾಯಗಳಿಗೆ ಬರುತ್ತಿದ್ದ ವಿದ್ಯಾರ್ಥಿವೇತನವನ್ನು ನಿಲ್ಲಿಸಿತು ಎಂದು ಅವರು ದೂರಿದರು.

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ. ಆದರೆ ಬಿಜೆಪಿ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಹಾಗೇನಾದರೂ ಆದರೆ ದೇಶದ ದಲಿತರು, ಶೂದ್ರರು, ಮಹಿಳೆರು, ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಸಂವಿಧಾನ ಬದಲಾದರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಎಚ್ಚರಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಮಾದರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಸಮುದಾಯಗಳಿಗೆ ಶೇ 24.1 ಮೀಸಲಾತಿಯನ್ನು ದೇಶದಾದ್ಯಂತ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ವಿವಿಧ ಪಕ್ಷಗಳ ಮುಖಂಡರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡ ಬಳಿಕ ಅವರು ಮಾತನಾಡಿದರು.

Read More
Next Story