4 ರೈಲು ನಿಲ್ದಾಣಗಳಿಗೆ ಸಂತರ ಹೆಸರು ನಾಮಕರಣ ; ಕೇಂದ್ರ ಗೃಹ ಇಲಾಖೆಗೆ ಶಿಫಾರಸು
x
ರೈಲು ನಿಲ್ದಾಣ (ಪ್ರಾತಿನಿಧಿಕ ಚಿತ್ರ)

4 ರೈಲು ನಿಲ್ದಾಣಗಳಿಗೆ ಸಂತರ ಹೆಸರು ನಾಮಕರಣ ; ಕೇಂದ್ರ ಗೃಹ ಇಲಾಖೆಗೆ ಶಿಫಾರಸು

ರಾಜ್ಯ ಸರ್ಕಾರ ನಾಲ್ಕು ರೈಲು ನಿಲ್ದಾಣಗಳಿಗೆ ಸಂತರ ಹೆಸರು ನಾಮಕರಣ ಮಾಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ‌ ಎಂದು ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.


Click the Play button to hear this message in audio format

ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಬದಲಿಸಿ, ಮರು ನಾಮಕರಣ ಮಾಡಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಶಿಫಾರಸು ಮಾಡಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ರೈಲು ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂಬ ಹೆಸರು ಇಡಬೇಕೆಂದು ಪ್ರಸ್ತಾಪಿಸಿದ್ದಾರೆ.

ರಾಜ್ಯ ಸರ್ಕಾರ ಈ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ‌ ಎಂದು ವಿವರಿಸಿದ್ದಾರೆ.

ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ತಾವು ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಸಚಿವರು ಕೋರಿದ್ದಾರೆ.

Read More
Next Story