41 Students Fall Ill After Eating Onion Dosa in Kolar, Hospitalised
x

ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿಗಳು

ಕೋಲಾರದಲ್ಲಿ ಈರುಳ್ಳಿ ದೋಸೆ ತಿಂದು 41 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಗಳವಾರ ರಾತ್ರಿ ವಸತಿ ನಿಲಯದ 61 ವಿದ್ಯಾರ್ಥಿಗಳು ಊಟದಲ್ಲಿ ಈರುಳ್ಳಿ ದೋಸೆ ತಿಂದಿದ್ದರು. ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಹಲವು ವಿದ್ಯಾರ್ಥಿಗಳಲ್ಲಿ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡು, ವಾಂತಿ ಮತ್ತು ಭೇದಿ ಶುರುವಾಗಿದೆ.


ಇಲ್ಲಿನ ವಿದ್ಯಾಜ್ಯೋತಿ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಮಂಗಳವಾರ ರಾತ್ರಿ ನೀಡಿದ್ದ ಈರುಳ್ಳಿ ದೋಸೆ ಸೇವಿಸಿ 41 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಆಹಾರ ವಿಷಬಾಧೆಯಿಂದ ಬಳಲುತ್ತಿದ್ದ ಈ ವಿದ್ಯಾರ್ಥಿಗಳನ್ನು ತಕ್ಷಣವೇ ಕೋಲಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳವಾರ ರಾತ್ರಿ ವಸತಿ ನಿಲಯದ 61 ವಿದ್ಯಾರ್ಥಿಗಳು ಊಟದಲ್ಲಿ ಈರುಳ್ಳಿ ದೋಸೆ ತಿಂದಿದ್ದರು. ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಹಲವು ವಿದ್ಯಾರ್ಥಿಗಳಲ್ಲಿ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡು, ವಾಂತಿ ಮತ್ತು ಭೇದಿ ಶುರುವಾಗಿದೆ. ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ, 41 ವಿದ್ಯಾರ್ಥಿಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ನಡೆದ ಕೂಡಲೇ, ಅಧಿಕಾರಿಗಳ ತಂಡವು ಕಾಲೇಜಿನ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹೆಚ್ಚಿನ ತನಿಖೆಗಾಗಿ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ವರದಿ ಬಂದ ನಂತರವೇ ವಿದ್ಯಾರ್ಥಿಗಳ ಅನಾರೋಗ್ಯಕ್ಕೆ ನಿಖರ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Read More
Next Story