KFD | ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿ
x

ಮಂಗನಕಾಯಿಲೆಗೆ ಬಾಲಕನೊಬ್ಬ ಬಲಿಯಾಗಿದ್ದಾನೆ. 

KFD | ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿ

ರಾಮು ಹಾಗೂ ಮಮತಾ ಎಂಬವರ ಮಗ ರಚಿತ್ ಮೃತ ಬಾಲಕ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ. ಆ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ ಈ ವರ್ಷ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ.


ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಸಾವನ್ನಪ್ಪಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ದತ್ತರಾಜಪುರ ಗ್ರಾಮದಲ್ಲಿ ನಡೆದಿದೆ. ರಾಮು ಹಾಗೂ ಮಮತಾ ಎಂಬವರ ಮಗ ರಚಿತ್ ಮೃತ ಬಾಲಕ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ. ಆ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ ಈ ವರ್ಷ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ.

ಬಾಲಕ ಸಾವಿನ ಕುರಿತು ಒಂದು ವಾರದಲ್ಲಿ ಡೆತ್ ಅಡಿಟ್​ ವರದಿ ನೀಡಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.

ರಚಿತ್ ಅವರ ಸಹೋದರಿ ರಮ್ಯಾಗೆ ಏಪ್ರಿಲ್ 4 ರಂದು ಜ್ವರ ಬಂದಿತ್ತು. ಆಕೆಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ಮಾಡಿದ ಕೆಎಫ್‌ಡಿ ಪಾಸಿಟಿವ್ ದೃಢಪಟ್ಟಿತ್ತು. ಏಪ್ರಿಲ್ 5 ರಂದು, ರಚಿತ್​ಗೆ ಆಯಾಸ ಮತ್ತು ವಾಂತಿ ಹಿನ್ನೆಲೆಯಲ್ಲಿ ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೆಎಫ್​ಡಿ ಪಾಸಿಟಿವ್ ಪತ್ತೆಯಾಗಿತ್ತು. ರಚಿತ್​ನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಮಂಗನಕಾಯಿಲೆ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ 1957ರಲ್ಲಿ ಮೊದಲ ಬಾರಿ ಮಂಗನಕಾಯಿಲೆ ಕಾಣಿಸಿಕೊಂಡಿತ್ತು. ಸಂಶೋಧನೆ ವೇಳೆ ಇದು ಹೊಸ ವೈರಸ್ ಎಂಬುದು ಗೊತ್ತಾದ ಬಳಿಕ Kyasanur Forest Disease (KFD) ಎಂದು ಹೆಸರಿಡಲಾಯಿತು.

ಮಂಗಗಳಿಗೆ ಕಚ್ಚಿದ ಉಣುಗು ಮನುಷ್ಯರಿಗೆ ಕಚ್ಚುವುದರಿಂದ ಈ ರೋಗ ಹರಡುತ್ತಿದೆ. ಮನುಷ್ಯನಿಂದ ಮನುಷ್ಯನಿಗೆ ಹರಡುವ ಕಾಯಿಲೆ ಅಲ್ಲ. ಸಾಧಾರಣವಾಗಿ ಈ ಉಣುಗುಗಳು ಅಕ್ಟೋಬರ್‌ನಲ್ಲಿ ಹುಟ್ಟಿಕೊಂಡು ಡಿಸೆಂಬರ್ ನಂತರ ವೈರಾಣು ಹರಡುತ್ತವೆ. ಬೇಸಿಗೆ ಕಾಲದಲ್ಲೇ ಹೆಚ್ಚಾಗಿ ಹರಡುತ್ತವೆ. ಮಂಗಗಳು ಸಾಯುವುದು ಈ ರೋಗದ ಮುನ್ಸೂಚನೆಯಾಗಿದೆ.

Read More
Next Story