ನಂದಿಬೆಟ್ಟದಲ್ಲಿನ ವಿಶೇಷ ಸಭೆಯಲ್ಲಿ ಶೇ.90ರಷ್ಟು ಬೆಂಗಳೂರು ವಿಭಾಗದ ವಿಷಯಗಳ ಚರ್ಚೆ
x

ನಂದಿಬೆಟ್ಟದಲ್ಲಿನ ವಿಶೇಷ ಸಭೆಯಲ್ಲಿ ಶೇ.90ರಷ್ಟು ಬೆಂಗಳೂರು ವಿಭಾಗದ ವಿಷಯಗಳ ಚರ್ಚೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ 48 ವಿಷಯಗಳು ಚರ್ಚೆಯಾಗಿದೆ. ಅಲ್ಲದೇ, 3400 ಕೋಟಿ ರೂಪಾಯಿ ಮೊತ್ತವನ್ನು ಮಂಜೂರು ಮಾಡಲಾಗಿದೆ.


ಮೊಟ್ಟ ಮೊದಲಬಾರಿಗೆ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಶೇ.90ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಒಟ್ಟು 48 ವಿಷಯಗಳು ಚರ್ಚೆಯಾಗಿದೆ. ಅಲ್ಲದೇ, 3400 ಕೋಟಿ ರೂಪಾಯಿ ಮೊತ್ತವನ್ನು ಮಂಜೂರು ಮಾಡಿದ್ದೇವೆ. 2050 ಕೋಟಿ ರೂಪಾಯಿ ಬೆಂಗಳೂರು ಜಿಲ್ಲಾ ಭಾಗಕ್ಕೆ ಕೊಟ್ಟಿದ್ದೇವೆ ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ರೂಪಾಯಿ ಪರಿಷ್ಕೃತ ಅಂದಾಜು ಮಾಡಲಾಗಿದೆ. ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆ ನೀಡಲಾಗಿದೆ. ೨೪.1ಟಿಎಂಸಿ ನೀರಿನಲ್ಲಿ ಕುಡಿಯುವ ನೀರಿಗೆ 14 ಟಿಎಂಸಿ ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಪೂರ್ಣಗೊಳಿಸಲು ತೀರ್ಮಾಣ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡಲಾಗುವುದು ಎಂದರು.

9807ಕೋಟಿ ರೂಪಾಯಿ ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ‌ ಕೆಲಸ ಶೇ. ೮೫ ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ ೮ ಸಾವಿರ ಕೋಟಿ ರೂಪಾಯಿ ಬೇಕಾಗಿದೆ. ಬಾಕಿ ಉಳಿದಿರುವುದು ೬ ಸಾವಿರ ಕೋಟಿ ರೂಪಾಯಿ ಆಗಿದೆ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡಲಾಗುತ್ತದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆ

ಬೆಂಗಳೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳು ಚರ್ಚೆ ನಡೆಸಲಾಗಿದ್ದು, 2250 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸಲಾಗುತ್ತಿದೆ. ಮೊದಲಿಗೆ ಕಲಬುರಗಿಯಲ್ಲಿ ನಡೆಸಲಾಯಿತು. ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಲಾಯಿತು. ಮೂರನೆಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲಾಗಿದೆ ಎಂದರು.

ಸಚಿವ ಸಂಪುಟ ಸಭೆಯಲ್ಲಿ ನಾವು 3400 ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ. ಇದರಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಪಾಯಿಗಳನ್ನು ಒದಗಿಸುವ ಕಾಮಗಾರಿ, ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು ಎಂದು ತಿಳಿಸಿದರು.

Read More
Next Story