
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ.
ಕೊಡಗಿನ ಪೊನ್ನಂಪೇಟೆ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಅಯ್ಯಮಾಡ ಮಾದಯ್ಯ ಅವರು ಸೋಮವಾರ ಬೆಳಗ್ಗೆ 6.30ರ ಸುಮಾರಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಇದ್ದಕ್ಕಿದ್ದಂತೆ ಕಾಡಾನೆ ದಾಳಿ ನಡೆಸಿದೆ.
ಗೋಣಿಕೊಪ್ಪಲು: ಕಾಡಾಣೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದಲ್ಲಿ ಸೋಮವಾರ (ಏ.15) ಸಂಭವಿಸಿದೆ.
ಅಯ್ಯಮಾಡ ಮಾದಯ್ಯ (50) ಎಂಬುವವರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಅಯ್ಯಮಾಡ ಮಾದಯ್ಯ ಅವರು ಸೋಮವಾರ ಬೆಳಗ್ಗೆ 6.30ರ ಸುಮಾರಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಇದ್ದಕ್ಕಿದ್ದಂತೆ ಕಾಡಾನೆ ದಾಳಿ ನಡೆಸಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಶ್ರೀಮಂಗಲದ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಅರವಿಂದ್ ತಿಳಿಸಿದ್ದಾರೆ.
ನಿರಂತರವಾಗಿ ಹೆಚ್ಚುತ್ತಿರುವ ಕಾಡಾನೆ ದಾಳಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ತೆರಳಿದ್ದಾರೆ. ಇದೇ ಗ್ರಾಮದ ವ್ಯಾಪ್ತಿಯಲ್ಲಿ ಕಾಡಾನೆ ಸಂಚರಿಸುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
Next Story