Rape Case | ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ;  ಕಾಮುಕನ ಬಂಧನ
x
ರಾಮಮೂರ್ತಿ ನಗರ ಪೊಲೀಸ್‌ ಠಾಣೆ

Rape Case | ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ; ಕಾಮುಕನ ಬಂಧನ

ಬಾಲಕಿ ಮೇಲೆ ಅತ್ಯಾಚಾರವೆಸಗಿದ ಬಿಹಾರ ಮೂಲದ ಆರೋಪಿ ಅಭಿಷೇಕ್‌ ಕುಮಾರ್‌ನನ್ನು (25) ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಬಿಹಾರ ಮೂಲದ ಕಟ್ಟಡ ಕೂಲಿ ಕಾರ್ಮಿಕನೊಬ್ಬ ಅತ್ಯಾಚಾರ ಎಸಗಿದ್ದರಿಂದ ಬಾಲಕಿ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿದ ಬಿಹಾರ ಮೂಲದ ಆರೋಪಿ ಅಭಿಷೇಕ್‌ ಕುಮಾರ್‌ನನ್ನು (25) ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಳು. ಇದನ್ನು ಗಮನಿಸಿದ ಆರೋಪಿ ಅಭಿಷೇಕ್‌, ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ. ತೀವ್ರ ನೋವಿನಿಂದ ನರಳುತ್ತಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇದಕ್ಕೂ ಮುನ್ನ ಬಾಲಕಿಯ ಕಿರುಚಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಆರೋಪಿಯನ್ನು ಹಿಡಿದು, ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ರಾಮಮೂರ್ತಿ ನಗರ ಸಮೀಪದ ಹೊಯ್ಸಳ ನಗರದಲ್ಲಿ ಬಾಲಕಿಯ ಕುಟುಂಬ ಕಟ್ಟಡ ಕೂಲಿ ಕೆಲಸ ಮಾಡಿಕೊಂಡು ನೆಲೆಸಿತ್ತು. ಇದೇ ಜಾಗದಲ್ಲಿ ಬಿಹಾರ ಮೂಲದ ಆರೋಪಿ ಅಭಿಷೇಕ್‌ ಕೂಡ ಆರು ತಿಂಗಳಿಂದ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆಯಲಾಗಿದೆ ಎಂದು ರಾಮಮೂರ್ತಿ ನಗರ ಪೊಲೀಸ್ ಇನ್‌ಸ್ಪೆಕ್ಟರ್‌ ಮುತ್ತುರಾಜ ಗೌಡ ಅವರು 'ದ ಫೆಡರಲ್‌ ಕರ್ನಾಟಕʼಕ್ಕೆ ತಿಳಿಸಿದರು.

ರಾಮಮೂರ್ತಿನಗರ ಪೊಲೀಸ್‌ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೊ ಪ್ರಕರಣ ಮತ್ತು ಬಿಎನ್ಎಸ್ ಕಾಯ್ದೆ ಸಂಬಂಧಿತ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ.

Read More
Next Story