ರ‍್ಯಾಗಿಂಗ್‌ಗೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
x

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ರ‍್ಯಾಗಿಂಗ್‌ಗೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಭಂಡಾರಿ ‌ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಅಂಜಲಿ ಕಾಲೇಜಿನಲ್ಲಿ ರ‍್ಯಾಗಿಂಗ್ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಾವಿಗೆ ಶರಣಾಗಿದ್ದಾರೆ.


ಸಹಪಾಠಿಗಳ ರ‍್ಯಾಗಿಂಗ್‌ಗೆ ಮನನೊಂದು ಎಂಎ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ.

ಅಂಜಲಿ ಮುಂಡಾಸ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಭಂಡಾರಿ ‌ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಅಂಜಲಿ ಕಾಲೇಜಿನಲ್ಲಿ ರ‍್ಯಾಗಿಂಗ್ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೂವರ ಹೆಸರು ಹಾಗೂ ಅವರ ಮೊಬೈಲ್​ ನಂಬರ್ ಬರೆದಿಟ್ಟಿದ್ದಾಳೆ.

ಡೆತ್​ ನೋಟ್​​ನಲ್ಲಿ ಏನಿದೆ?

ನನ್ನ ಸಾವಿಗೆ ಕಾರಣವಾದ ಈ ಮೂವರು ವ್ಯಕ್ತಿಗಳು ನನ್ನ ಬದುಕಿನಲ್ಲಿ ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು ನನ್ನ ಬಗ್ಗೆ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ. ಮತ್ತು ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. Saying Good Bye ಎಂದು ಸಹಿ ಮಾಡಿದ್ದಾರೆ.

ಈ ಬಗ್ಗೆ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More
Next Story