ಅರಣ್ಯಾಧಿಕಾರಿಗಳಿಗೆ ಚಿರತೆ ಹಿಡಿದು ಕೊಟ್ಟ ತುಮಕೂರಿನ ಯುವಕ
x
ಚಿರತೆಯ ಬಾಲದಲ್ಲಿ ಹಿಡಿದ ಯುವಕ

ಅರಣ್ಯಾಧಿಕಾರಿಗಳಿಗೆ ಚಿರತೆ ಹಿಡಿದು ಕೊಟ್ಟ ತುಮಕೂರಿನ ಯುವಕ

ಯುವಕ ಚಿರತೆ ಹಿಡಿದ ಕೂಡಲೇ ಅರಣ್ಯ ಇಲಾಖೆಯವರು ಚಿರತೆ ಮೇಲೆ ಬಲೆ ಹಾಕಿದ್ದು, ಅದನ್ನು ರಕ್ಷಿಸಿ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


Click the Play button to hear this message in audio format

ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರಣ್ಯ ಇಲಾಖೆಯವರಿಗೆ ಯುವಕನೊಬ್ಬ ಚಿರತೆ ಹಿಡಿದು ಕೊಟ್ಟಿರುವ ಘಟನೆ ತುಮಕೂರಿನ ತಿಪಟೂರಿನಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಊರಿಗೆ ಚಿರತೆ ನುಗ್ಗಿದ ವಿಚಾರ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಬಲೆಯೊಂದಿಗೆ ಚಿರತೆ ಹಿಡಿಯುವ ಕಾರ್ಯಾಚರಣೆಗೆ ಇಳಿದಿದ್ದಾರೆ. ಆದರೆ ಅರಣ್ಯ ಇಲಾಖೆಯವರ ಕೈಗೆ ಚಿರತೆ ಸಿಕ್ಕಿಲ್ಲ, ಇದೇ ವೇಳೆ ಅಲ್ಲಿದ್ದ ಯುವಕನೋರ್ವ ಚಿರತೆಯ ಬಾಲದಲ್ಲಿ ಹಿಡಿದಿದ್ದಾನೆ. ಆದರೆ ಚಿರತೆ ತನ್ನ ಬಾಲ ಹಿಡಿದವನ ಮೇಲೆ ತಿರುಗಿ ದಾಳಿ ಮಾಡಿಲ್ಲ, ಒಂದು ವೇಳೆ ಚಿರತೆ ದಾಳಿ ಮಾಡಿದ್ದರೆ ದೊಡ್ಡ ಅನಾಹುತ ನಡೆಯುತ್ತಿತ್ತು.


ಯುವಕ ಚಿರತೆ ಹಿಡಿದ ಕೂಡಲೇ ಅರಣ್ಯ ಇಲಾಖೆಯವರು ಚಿರತೆ ಮೇಲೆ ಬಲೆ ಹಾಕಿದ್ದು, ಅದನ್ನು ರಕ್ಷಿಸಿ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗೆ ನೆರವಾದ ವ್ಯಕ್ತಿಯನ್ನು ಆನದಂಸ್ ಎಂದು ಗುರುತಿಸಲಾಗಿದ್ದು, ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಯುವಕನ ಸಾಧನೆಗೆ ನೆಟ್ಟಿಗರು ಭಾರಿ ಶ್ಲಾಘನೆ ವ್ಯಕ್ತವಾಗುತ್ತಿದೆ.

Read More
Next Story