ದಕ್ಷಿಣಕನ್ನಡ | ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ
x
ಪ್ರಾತಿನಿಧಿಕ ಚಿತ್ರ

ದಕ್ಷಿಣಕನ್ನಡ | ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ


ದಕ್ಷಿಣಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿರುವ ಕೃತ್ಯ ಸೋಮವಾರ (ಮಾ.4) ಬೆಳಿಗ್ಗೆ ನಡೆದಿದೆ.

ಕಡಬ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮೂವರು ವಿದ್ಯಾರ್ಥಿನಿಯರು ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಮಾಸ್ಕ್ ಹಾಗೂ ಹ್ಯಾಟ್ ಧರಿಸಿ ಬಂದ ದುಷ್ಕರ್ಮಿ ಏಕಾಏಕಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ.

ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯರ ಮೇಲೆ ಈ ಆ್ಯಸಿಡ್ ದಾಳಿ ನಡೆದಿದೆ ಏಂದು ಹೇಳಲಾಗಿದೆ.

ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಆಸಿಡ್‌ನಿಂದ ಗಂಭೀರ ಗಾಯಗಳಾಗಿದ್ದು, ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.

ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಕೇರಳದ ಮಲ್ಲಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂಬಿಎ ವಿದ್ಯಾರ್ಥಿ ಅಬೀನ್ ಎಂದು ತಿಳಿದುಬಂದಿದೆ. ಆರೋಪಿ ಅಬೀನ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ.

Read More
Next Story