ತುಂಗಭದ್ರಾ ಜಲಾಶಯ | ತಜ್ಞರ ವರದಿ ಆಧರಿಸಿ ಗೇಟ್ ಬದಲಿಸುವ ಬಗ್ಗೆ ಕ್ರಮ: ಸಿದ್ದರಾಮಯ್ಯ
x
ತುಂಗಭದ್ರಾ ಜಲಾಶಯಕ್ಕೆ ಇಂದು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು.

ತುಂಗಭದ್ರಾ ಜಲಾಶಯ | ತಜ್ಞರ ವರದಿ ಆಧರಿಸಿ ಗೇಟ್ ಬದಲಿಸುವ ಬಗ್ಗೆ ಕ್ರಮ: ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯಕ್ಕೆ ಇತ್ತೀಚಿಗೆ ಕೇಂದ್ರದ ತಜ್ಞರ ತಂಡ ಭೇಟಿ ನೀಡಿದ್ದು, ತಂಡ ನೀಡುವ ವರದಿಯ ಆಧಾರದ ಮೇಲೆ ಕ್ರಸ್ಟ್ ಗೇಟ್ ಬದಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


Click the Play button to hear this message in audio format

ತುಂಗಭದ್ರಾ ಜಲಾಶಯಕ್ಕೆ ಇತ್ತೀಚಿಗೆ ಕೇಂದ್ರದ ತಜ್ಞರ ತಂಡ ಭೇಟಿ ನೀಡಿದ್ದು, ತಂಡ ನೀಡುವ ವರದಿಯ ಆಧಾರದ ಮೇಲೆ ಕ್ರಸ್ಟ್ ಗೇಟ್ ಬದಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ವರ್ಷದಲ್ಲಿ 2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಭಾನುವಾರ ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದರು.

ಕ್ರಸ್ಟ್ ಗೇಟ್ ಮುರಿದಹೋದ ಬಳಿಕ ಪೋಲಾಗಿದ್ದ ನೀರು ಮರಳಿ ಸಂಗ್ರಹವಾಗಿದ್ದು ಖುಷಿಯಾಗಿದೆ. ಈಗ 100 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, ಎರಡನೆ ಬೆಳೆಗೂ ನೀರು ಲಭಿಸುವ ವಿಶ್ವಾಸವಿದೆ. 50 ವರ್ಷಗಳಾದಾಗಲೇ ಗೇಟ್ ಬದಲಿಸಬೇಕಾಗಿತ್ತು. ಈಗ 70 ವರ್ಷಗಳಾಗಿವೆ. 70 ವರ್ಷಗಳಿಂದ ಗೇಟ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಉತ್ತಮ ನಿರ್ವಹಣೆ ಮಾಡಿರುವುದರಿಂದ 70 ವರ್ಷ ಕೆಲಸ ಮಾಡಿದೆ. ಪ್ರಸ್ತುತ ತಜ್ಞರ ಸಮಿತಿ ರಚನೆಯಾಗಿದ್ದು, ಅವರು ವರದಿ ನೀಡಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ತುಂಗಭದ್ರ ಜಲಾಶಯ ಮತ್ತೆ ತುಂಬಿದೆ. 101.77 ಟಿ.ಎಂ.ಸಿ ನೀರು ಲಭ್ಯವಿದೆ. ಮುಂಗಾರು ಮತ್ತು ಹಿಂಗಾರು ಬಿತ್ತನೆಗೆ ನೀರು ಸಿಗಲಿದೆ. ಕೊಚ್ಚಿಹೋಗಿದ್ದ 19 ನೇ ಕ್ರಸ್ಟ್ ಗೇಟ್ ನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್ ಅವರು ಸ್ಥಳದಲ್ಲಿಯೇ ಇದ್ದು ದುರಸ್ತಿಗೆ ಕ್ರಮ ವಹಿಸಿದರು. ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ, ಜಿಂದಾಲ್, ನಾರಾಯಣ್ ಇಂಜಿನಿಯರಿಂಗ್ ಹಾಗೂ ಇಂಜಿನಿಯರ್‌ಗಳು, ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಆದಷ್ಟು ತ್ವರಿತವಾಗಿ ಗೇಟ್ ಅಳವಡಿಸಲು ಸಾಧ್ಯವಾಯಿತು. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. 20ಕ್ಕೂ ಹೆಚ್ಚು ಟಿ.ಎಂ.ಸಿ ನೀರು ಉಳಿಯಿತು ಎಂದರು.

ಬಿಜೆಪಿ ಕಾಲದಲ್ಲಿ ರಸ್ತೆಗಳಾಗಿಲ್ಲ

ನಮ್ಮ ಸರ್ಕಾರವಿದ್ದಾಗ ರಸ್ತೆಗಳ ನಿರ್ಮಾಣ ಮಾಡಿದ್ದೆವು. ಬಿಜೆಪಿ ಕಾಲದಲ್ಲಿ ರಸ್ತೆಗಳಾಗಿಲ್ಲ. ಈ ವರ್ಷ ಉತ್ತಮ ಮಳೆಯಾಗಿರುವುದರಿಂದ ರಸ್ತೆಗಳು ಹಾಳಾಗಿವೆ, ಅದರ ದುರಸ್ತಿ ಮಾಡಿಸಲಾಗುವುದು ಎಂದು ಅವರು ತಿಳಿಸಿದರು.

ಸರ್ಕಾರ ಗಮನಹರಿಸಲಿದೆ

ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರೆ ಸರ್ಕಾರ ಈ ಬಗ್ಗೆ ಗಮನಹರಿಸಲಿದೆ. ಪತ್ರ ಸೋರಿಕೆಯಾಗಿದೆ ಎಂಬ ಬಗ್ಗೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ, ರಾಜ್ಯಪಾಲರ ಕಚೇರಿಯಿಂದಲೇ ಈ ಮಾಹಿತಿ ಸೋರಿಕೆಯಾಗಿರಬಹುದು. ಈ ಬಗ್ಗೆ ತನಿಖೆಯಾಗಲಿ. ನಾನೂ ಪತ್ರಿಕೆಯಲ್ಲಿ ಓದಿ ತಿಳಿದಿದ್ದೇನೆ ಎಂದರು.

ಹಾಲಿನ ದರ ಹೆಚ್ಚಳ ಮಾಡಲು ಒತ್ತಾಮಾಗಡಿಯಲ್

ಹಲವು ಮಂದಿ ಶಾಸಕರು, ರೈತರು ಹಸು ಸಾಕಣೆಯ ವೆಚ್ಚ ಹೆಚ್ಚಾಗಿದ್ದು ಹಾಲಿನ ದರ ಹೆಚ್ಚಳ ಮಾಡಲು ಒತ್ತಾಯ ಮಾಡಿದರು. ಒಂದು ವೇಳೆ ಹಾಲಿನ ದರ ಹೆಚ್ಚು ಮಾಡಿದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಬೇಕೆಂದು ಸೂಚಿಸಲಾಗಿದೆ.

ದ್ವೇಷದ ರಾಜಕಾರಣ ಮಾಡುವುದಿಲ್ಲ

ನಾವು ಯಾರ ಮೇಲೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ಅಪರಾಧ ಮಾಡಿ ಎಂದು ನಾವು ಯಾರಿಗೂ ಹೇಳಿಲ್ಲ. ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದೆ. ನಮ್ಮ ಶಾಸಕರು ನನ್ನನ್ನು ಭೇಟಿ ಮಾಡಿ ಎಸ್.ಐ.ಟಿ ರಚಿಸಲು ಕೋರಿದರು. ಅವರ ಕೋರಿಕೆಗೆ ಸ್ಪಂದಿಸಿ ಎಸ್.ಐ.ಟಿ ರಚಿಸಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಎಫ್ ಐ ಆರ್ ಆಗುವುದು. ನಾವು ಯಾರಿಗೂ ಕಿರುಕುಳ ನೀಡಿ ಕೇಸು ದಾಖಲಿಸಿಲ್ಲ, ಸ್ವ ಇಚ್ಛೆಯಿಂದ ಕೇಸು ದಾಖಲಿಸಿದ್ದಾರೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹ್ಮದ್, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ ಸೇರಿದಂತೆ ಅನೇಕರು ಇದ್ದರು.

Read More
Next Story