ನಟ ಕಿಚ್ಚ ಸುದೀಪ್‌ ಅವರಿಗೆ ಮಾತೃವಿಯೋಗ; ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸರೋಜಾ
x

ನಟ ಕಿಚ್ಚ ಸುದೀಪ್‌ ಅವರಿಗೆ ಮಾತೃವಿಯೋಗ; ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸರೋಜಾ

ನಟ ಸುದೀಪ್‌ ಅವರ ತಾಯಿ ನಿಧನರಾಗಿದ್ದು, ಜೆ.ಪಿ.ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಭಾನುವಾರ ಮಧ್ಯಾಹ್ನ 12 ಗಂಟೆ ಬಳಿಕ ಅಂತಿಮ ವಿಧಿವಿಧಾನಗಳು ನಡೆಯಲಿವೆ


ನಟ ಕಿಚ್ಚ ಸುದೀಪ್ ಅವರಿಗೆ ಮಾತೃವಿಯೋಗವಾಗಿದೆ. ವಯೋಸಹಜ ಕಾಯಿಲೆಗಳಿಂದ ಸುದೀಪ್‌ ಅವರ ತಾಯಿ ಸರೋಜಾ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಸರೋಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆ.ಪಿ ನಗರದ ನಿವಾಸಕ್ಕೆ ತಂದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಭಾನುವಾರ ಮಧ್ಯಾಹ್ನ 12 ಗಂಟೆಯ ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶನಿವಾರ ಸಂಜೆ ಸುದೀಪ್ ಅವರ ತಾಯಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಸುದೀಪ್ ಅವರ ತಾಯಿ ಸರೋಜಾ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದು, ಅಭಿಮಾನಿಗಳು ಜೆ.ಪಿ ನಗರದ ನಿವಾಸದತ್ತ ಆಗಮಿಸುತ್ತಿದ್ದಾರೆ.

Read More
Next Story