ಮರ ಕೊಂಬೆ ಬಿದ್ದು ಬ್ರೈನ್‌ ಡೆಡ್‌ ಆಗಿದ್ದ ಅಕ್ಷಯ್​; ಚಿಕಿತ್ಸೆ ಫಲಕಾರಿಯಾಗದೆ ಸಾವು
x

ತಲೆಗೆ ಗಂಭೀರವಾಗಿ ಗಾಯಗೊಂಡಿರುವ ಅಕ್ಷಯ್‌‌ ಮೃತಪಟ್ಟಿದ್ದಾರೆ. 

ಮರ ಕೊಂಬೆ ಬಿದ್ದು ಬ್ರೈನ್‌ ಡೆಡ್‌ ಆಗಿದ್ದ ಅಕ್ಷಯ್​; ಚಿಕಿತ್ಸೆ ಫಲಕಾರಿಯಾಗದೆ ಸಾವು

ಅಪ್ಪನ ಹುಟ್ಟುಹಬ್ಬದ ಬೇಳೆ ಮಟನ್‌ ತರಲೆಂದು ಹೋಗಿದ್ದ ವೇಳೆ ಮರ ಕೊಂಬೆ ತಲೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರಿನ ಅಕ್ಷಯ್, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.


ಮರ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅಕ್ಷಯ್​ ಬದುಕಿಸುವ ಪ್ರಯತ್ನ ಕೊನೆಗೂ ಕೊನೆಯಾಗಿದೆ. ಅಪ್ಪನ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ವೇಳೆ ಮರ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರಿನ ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಅಕ್ಷಯ್ ಗುರುವಾರ (ಜೂನ್ 19) ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ದಾಖಲಿಸಿ ತಲೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತಾದರೂ ಬ್ರೈನ್ ಡೆಡ್ ಆಗಿತ್ತು. ಆದರೆ ಗುರುವಾರ(ಜೂನ್ 19) ಮಧ್ಯಾಹ್ನ 1.15ಕ್ಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅಕ್ಷಯ್ ಮೂಲತಃ ಬನಶಂಕರಿಯ ಕತ್ರಿಗುಪ್ಪೆಯ ಶ್ರೀನಗರದ ನಿವಾಸಿ. ರಾಜಾಜಿನಗರದ ಖಾಸಗಿ ಕಂಪನಿವೊಂದರಲ್ಲಿ ಹೆಚ್.ಆರ್. ಕೆಲಸ ಮಾಡುತ್ತಿದ್ದರು. ಇಡೀ ಕುಟುಂಬದ ಆಧಾರ ಸ್ತಂಭವಾಗಿದ್ದರು. ತಾನೇ ದುಡಿದು ಇಡೀ ಕುಟುಂಬವನ್ನು ನೋಡಿಕೊಳ್ಳುತ್ತಿದ್ದರು. ಈಗ ಅವರ ಸಾವಿನಿಂದ, ಆತನನ್ನೇ ನಂಬಿದ ಕುಟುಂಬ ಕಣ್ಣಿರು ಹಾಕುತ್ತಿದೆ.

ಅಕ್ಷಯ್ ಕುಟುಂಬಕ್ಕೆ ಬಿಬಿಎಂಪಿ ಚಿಕಿತ್ಸಾ ವೆಚ್ಚದ ಹೊರತುಪಡಿಸಿ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಏನಾಗಿತ್ತು?

ಜೂನ್ 19ರಂದು ತಂದೆಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಕ್ಷಯ್ ಮಟನ್ ತರಲು ಹೋಗಿದ್ದ ವೇಳೆ ಶ್ರೀನಿವಾಸ ನಗರದ ಬ್ರಹ್ಮ ಮಂದಿರದ ಬಳಿ ಮರದ ಕೊಂಬೆ ಮುರಿದು ಅಕ್ಷಯ್ ತಲೆ ಮೇಲೆ ಬಿದ್ದಿತ್ತು. ಪರಿಣಾಮ ಪ್ರಜ್ಜೆ ತಪ್ಪಿ ರಸ್ತೆಯಲ್ಲಿ ಬಿದ್ದ ಅಕ್ಷಯ್​​ನನ್ನ ಕೂಡಲೇ ಸ್ಥಳೀಯ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಿದ್ದರು.

ತಲೆ ಭಾಗಕ್ಕೆ ಗಂಭೀರ ಗಾಯವಾದ ಕಾರಣ, ತಲೆಯಲ್ಲಿ ರಕ್ತ ಹರಿಯುತ್ತಿರುವುದು ನಿಲ್ಲದ ಕಾರಣ ತ್ಯಾಗರಾಜನಗರದ ಪ್ರಶಾಂತ್ ಆಸ್ಪತ್ರೆಯಿಂದ ಜಯನಗರದ 3ನೇ ಬ್ಲಾಕ್​ ನಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೆ ಇಹಲೋಕ ತ್ಯಜಿಸಿದ್ದಾರೆ.

ಅಕ್ಷಯ್ ಮೃತಪಡುತ್ತಿದ್ದಂತೆ ಕುಟುಂಬಸ್ಥರು ಬಿಬಿಎಂಪಿ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಯನಗರದ ಅಪೋಲೋ ಆಸ್ಪತ್ರೆ ಮುಂದೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ.

Read More
Next Story