
KIADB Land Scam| ಖರ್ಗೆ ಟ್ರಸ್ಟ್‌ಗೆ ಜಮೀನು; ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಪಾಲರಿಗೆ ದೂರು
ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮಂಗಳವಾರ ದೂರು ನೀಡಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ನಡೆಸುವ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮಂಗಳವಾರ ದೂರು ನೀಡಿದ್ದಾರೆ.
ರಾಜ್ಯಪಾಲರಿಗೆ ದೂರು ಸಲ್ಲಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಕೈಗಾರಿಕಾ ನಿವೇಶನ ಪಡೆಯುವ ಹಕ್ಕು ಎಲ್ಲರಿಗೂ ಇದೆ. ಆದರೆ, ಸಿಎ ಸೈಟ್ ಪಡೆಯಲು ಕೆಲವು ಕಾನೂನುಗಳಿವೆ. ಸಾಮಾಜಿಕ ಚಟುವಟಿಕೆ, ರಂಗಮಂದಿರ, ಆಸ್ಪತ್ರೆ- ಹೀಗೆ ನಿಗದಿತ ಉದ್ದೇಶಕ್ಕೆ ನಮೂದಾಗಿರುತ್ತದೆ. ಇದನ್ನು ಇತರ ಅರ್ಜಿಗಳನ್ನು ತಿರಸ್ಕರಿಸಿ ಪ್ರಬಲರಿಗೆ ಕೊಡಲಾಗಿದೆ. ಇದರಿಂದ ಅನುಮಾನ ಶುರುವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯಸಭಾ ವಿಪಕ್ಷ ನಾಯಕ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಧಾಕೃಷ್ಣ ಅವರ ಖಾಸಗಿ, ಒಂದೇ ಮನೆಗೆ ಸೀಮಿತ ಟ್ರಸ್ಟಿಗೆ ನಿವೇಶನ ಕೊಡಲಾಗಿದೆ.
ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ ಟ್ರಸ್ಟ್ ಕಲಬುರ್ಗಿಯಲ್ಲಿ ನೋಂದಣಿ ಮಾಡಿದ್ದಾರೆ. ಇದೊಂದು ಧಾರ್ಮಿಕ ಉದ್ದೇಶದ ಟ್ರಸ್ಟ್. ಆದರೆ, ಏರೋಸ್ಪೇಸ್ ಸಂಬಂಧಿಸಿ ನಿವೇಶನ ಪಡೆದಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.