
ಸಾಂದರ್ಭಿಕ ಚಿತ್ರ
ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ : ಅಪರಿಚಿತ ವಾಹನ ಡಿಕ್ಕಿಗೆ ಕೂಲಿ ಕಾರ್ಮಿಕ ಬಲಿ
ಆಂಧ್ರ ಪ್ರದೇಶದ ಮೂಲದ ಬಾಲಾಜಿ (40) ಎಂಬ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ. ಮುಂಜಾನೆ ಕೆಲಸಕ್ಕೆಂದು ರಸ್ತೆ ಬದಿ ನಿಂತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.
ಹಿಟ್ ಅಂಡ್ ರನ್ಗೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರೈಲ್ವೆ ಸ್ಟೇಷನ್ ವೃತ್ತದ ಬಳಿ ನಡೆದಿದೆ.
ಆಂಧ್ರ ಪ್ರದೇಶದ ಮೂಲದ ಬಾಲಾಜಿ (40) ಎಂಬ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ. ಮುಂಜಾನೆ ಕೆಲಸಕ್ಕೆಂದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅತಿಯಾದ ರಕ್ತಸ್ರಾವದಿಂದ ಬಾಲಾಜಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಆರೋಪಿಯ ವಾಹನವನ್ನು ಗುರುತಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ತನಿಖೆಗೆ ಮಹತ್ವದ ಸಾಕ್ಷ್ಯ ಒದಗಿಸಲಿವೆ. ಆರೋಪಿಯನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು ಎಂದು ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ತಿಳಿಸಿದ್ದಾರೆ.