
ನಾಳೆ ಉಡುಪಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ; ಕೃಷ್ಣಮಠದಲ್ಲಿ ವಿಶೇಷ ಪೂಜೆ, ಗೀತೋತ್ಸವದಲ್ಲಿ ಭಾಗಿ
ಸಂಜೆ 4 ಗಂಟೆಗೆ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ .
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ನಾಳೆ (ಡಿಸೆಂಬರ್ 7) ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಡೆಯುತ್ತಿರುವ ‘ಗೀತೋತ್ಸವ’ದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ .
ಪವನ್ ಕಲ್ಯಾಣ್ ಅವರು ನಾಳೆ ಮಧ್ಯಾಹ್ನ 2. 30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 3:30ರ ಸುಮಾರಿಗೆ ಉಡುಪಿ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ .
ಈ ಭೇಟಿಯ ವೇಳೆ ಪವನ್ ಕಲ್ಯಾಣ್ ಅವರು ಶ್ರೀ ಕೃಷ್ಣನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ದಕ್ಷಿಣ ಭಾರತದ ಪ್ರಭಾವಿ ರಾಜಕೀಯ ನಾಯಕ ಹಾಗೂ ನಟರೂ ಆಗಿರುವ ಪವನ್ ಕಲ್ಯಾಣ್ ಅವರ ಭೇಟಿಯ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ .

