
ಸಾಂದರ್ಭಿಕ ಚಿತ್ರ
ಮೈಸೂರು| ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ
ಮೈಸೂರಿನ ಸರಗೂರು ತಾಲೂಕಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮವೊಂದರ ರೈತ ಸ್ವಾಮಿ ಅವರು ತಮ್ಮ ಜಮೀನಿನ ಬಳಿ ದನಗಳನ್ನು ಮೇಯಿಸಲು ತೆರಳಿದ್ದ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.
ದನ ಕಾಯುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿ ಕೊಂದಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ನಡೆದಿದೆ. ದಂಡನಾಯ್ಕ ಅಲಿಯಾಸ್ ಸ್ವಾಮಿ(58) ಮೃತಪಟ್ಟವರು. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದ್ದು, ಇದೇ ರೈತ 8 ತಿಂಗಳ ಹಿಂದೆ ಆನೆ ದಾಳಿಗೆ ಒಳಗಾಗಿದ್ದ ಜೀವ ಅಪಾಯುದಿಂದ ಪಾರಾಗಿದ್ದ ಎನ್ನಲಾಗಿದೆ.
ಮೈಸೂರಿನ ಸರಗೂರು ತಾಲೂಕಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮವೊಂದರ ರೈತ ಸ್ವಾಮಿ ಅವರು ತಮ್ಮ ಜಮೀನಿನ ಬಳಿ ದನಗಳನ್ನು ಮೇಯಿಸಲು ತೆರಳಿದ್ದ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ತೀವ್ರ ಸ್ವರೂಪದ ಗಾಯಗಳಿಂದಾಗಿ ರೈತ ಸ್ವಾಮಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯು ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೀಡು ಮಾಡಿದೆ.
ಇತ್ತೀಚಿನ ದಿನಗಳಲ್ಲಿ ಮೈಸೂರು ಜಿಲ್ಲೆಯ ಸರಗೂರು ಮತ್ತು ಎಚ್.ಡಿ.ಕೋಟೆ ತಾಲೂಕುಗಳ ಅರಣ್ಯ ಅಂಚಿನ ಗ್ರಾಮಗಳಲ್ಲಿ ಹುಲಿಗಳ ಸಂಚಾರ ಹೆಚ್ಚಾಗಿದ್ದು, ಒಂದು ತಿಂಗಳ ಅಂತರದಲ್ಲಿ ಹಲವಾರು ದಾಳಿಗಳು ಸಂಭವಿಸಿವೆ. ಈ ಹಿಂದೆ ರಾಜಶೇಖರ ಮತ್ತು ದೊಡ್ಡನಿಂಗಯ್ಯ ಎಂಬ ರೈತರು ಸಹ ಹುಲಿ ದಾಳಿಗೆ ಬಲಿಯಾಗಿದ್ದರು. ಅಲ್ಲದೆ, ಕಾರ್ಯಾಚರಣೆಯ ವೇಳೆ ಮತ್ತೊಬ್ಬ ರೈತ ಮಹಾದೇವಗೌಡ ಗಂಭೀರವಾಗಿ ಗಾಯಗೊಂಡಿದ್ದರು.
ಒಂದೇ ತಿಂಗಳಲ್ಲಿ ಈ ಭಾಗದಲ್ಲಿ ಇಬ್ಬರು ರೈತರು ಹುಲಿ ದಾಳಿಗೆ ಬಲಿಯಾಗಿರುವುದು ಕಾಡಂಚಿನ ಗ್ರಾಮಗಳ ಜನರಲ್ಲಿ ತೀವ್ರ ಭೀತಿ ಮತ್ತು ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನರಹಂತಕ ಹುಲಿಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

