ಅರವಿಂದ ಕೇಜ್ರಿವಾಲ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ: ಆರ್.ಅಶೋಕ
x
ಆರ್‌. ಅಶೋಕ್‌

ಅರವಿಂದ ಕೇಜ್ರಿವಾಲ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ: ಆರ್.ಅಶೋಕ

ʻದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಿನಲ್ಲಿದ್ದರು. ಇದೀಗ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆʼ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.


ʻದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬಹಳ ದಿನ ಜೈಲಿನಲ್ಲಿದ್ದರು. ಇದೀಗ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆʼ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎನ್ನುವುದೇ ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೂ ಟಿಕೆಟ್ ನೀಡಲಾಗುತ್ತಿದೆ. ಟಿಕೆಟ್ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ಮರಳಿ ಜೈಲಿಗೆ ಹೋಗಬೇಕಿದ್ದು, ಅವರು ಮತ್ತೆ ಬಿಡುಗಡೆಯಾಗುವುದಿಲ್ಲʼ ಎಂದರು.

ʻಕೇಜ್ರಿವಾಲ್ ತಪ್ಪು ಮಾಡಿಲ್ಲ ಎಂದಾದರೆ, ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಗದಿದ್ದರೆ, ಅಪರಾಧಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆʼ ಎಂದರು.

ʻವಿಧಾನಪರಿಷತ್ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇಂದ್ರದ ನಾಯಕರು ನಿರ್ಧಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದ ನಾಯಕರ ಪಾತ್ರವಿಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಆಗ್ರಹಿಸುತ್ತೇವೆʼ ಎಂದರು.

Read More
Next Story