ಚನ್ನಪಟ್ಟಣ ಉಪಚುನಾವಣೆ | ನನ್ನ ಹೆಸರಲ್ಲೇ ಮತಯಾಚನೆ: ಡಿ.ಕೆ.ಶಿವಕುಮಾರ್‌
x

ಚನ್ನಪಟ್ಟಣ ಉಪಚುನಾವಣೆ | ನನ್ನ ಹೆಸರಲ್ಲೇ ಮತಯಾಚನೆ: ಡಿ.ಕೆ.ಶಿವಕುಮಾರ್‌

ಚನ್ನಪಟ್ಟಣ ಸೇರಿದ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ಈ ಕ್ಷೇತ್ರದಲ್ಲಿ ನಾವು ಭದ್ರ ಅಡಿಪಾಯ ಹಾಕಲು ತಯಾರಿ ನಡೆಸುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.


ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ನನ್ನ ಹೆಸರಲ್ಲೇ ಮತ ಯಾಚನೆ ಮಾಡುತ್ತೇನೆ. ನಮ್ಮ ಕುಟುಂಬದ ಯಾರೂ ಕೂಡ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಸೇರಿದ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ಕಳೆದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಕಡಿಮೆ ಮತಗಳು ಬಂದಿದ್ದವು. ಈಗ ನಾವು ನಮ್ಮ ಅಡಿಪಾಯ ಭದ್ರಪಡಿಸಿಕೊಳ್ಳಲು ಅಗತ್ಯ ತಯಾರಿ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇನ್ನೂ ಹತ್ತು ವರ್ಷ ಬಿಜೆಪಿಗೆ ವಿರೋಧ ಪಕ್ಷವೇ ಕಾಯಂ

ಮುಡಾ ಪ್ರಕರಣದಲ್ಲಿ ಬಿಜೆಪಿಯವರು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೇಳುತ್ತಾ ವಿರೋಧ ಪಕ್ಷದಲ್ಲೇ ಉಳಿಯಲಿದ್ದಾರೆ. ಇನ್ನೂ 10 ವರ್ಷದ ಅವರಿಗೆ ವಿರೋಧ ಪಕ್ಷದ ಸ್ಥಾನ ಕಾಯಂ ಎಂದು ಗೇಲಿ ಮಾಡಿದರು.

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕುರಿತು ಕೇಳಿದ ಪ್ರಶ್ನೆಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಮುಂದಿನ ವಾರ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

Read More
Next Story