ಡಿ ಕೆ ಶಿವಕುಮಾರ್​ ಅಕ್ರಮ ಆಸ್ತಿ ಗಳಿಕೆ ಪ್ರಕರಣ | ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​
x
ಡಿ.ಕೆ ಶಿವಕುಮಾರ್‌

ಡಿ ಕೆ ಶಿವಕುಮಾರ್​ ಅಕ್ರಮ ಆಸ್ತಿ ಗಳಿಕೆ ಪ್ರಕರಣ | ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​

ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್​ ನೀಡಿ ಸುಪ್ರೀಂಕೋರ್ಟ್ ​​ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.


Click the Play button to hear this message in audio format

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ.

ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್​ ನೀಡಿ ಸುಪ್ರೀಂಕೋರ್ಟ್‌,​ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು.

ವಿಚಾರಣೆಯ ಬಳಿಕ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್‌ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಸುಪ್ರೀಂಕೋರ್ಟ್ ​ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಪ್ರತಿವಾದ ಮಂಡಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್​ ಜಾರಿ ಮಾಡಿ, ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

Read More
Next Story