ಆದಾಯಕ್ಕೆ ಮೀರಿದ ಆಸ್ತಿ: ಡಿ.ಕೆ ಶಿವಕುಮಾರ್‌ಗೆ ಲೋಕಾಯುಕ್ತ ನೋಟಿಸ್
x
ಡಿ.ಕೆ ಶಿವಕುಮಾರ್‌

ಆದಾಯಕ್ಕೆ ಮೀರಿದ ಆಸ್ತಿ: ಡಿ.ಕೆ ಶಿವಕುಮಾರ್‌ಗೆ ಲೋಕಾಯುಕ್ತ ನೋಟಿಸ್

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ವಿವಿಧ ಇಲಾಖೆಗಳಿಂದ ನೋಟಿಸ್‌ ಬರುವುದು ಮುಂದುವರಿದಿದೆ. ಇದೀಗ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.


ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ವಿವಿಧ ಇಲಾಖೆಗಳಿಂದ ನೋಟಿಸ್ ಬರುತ್ತಿದ್ದು, ಸಂಕಷ್ಟ ತಪ್ಪುತ್ತಿಲ್ಲ. ಇದೀಗ ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗದಿಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬುಧವಾರ ನೊಟೀಸ್ ಜಾರಿ ಮಾಡಲಾಗಿದೆ.

ಡಿ.ಕೆ ಶಿವಕುಮಾರ್ ಅವರಿಗೆ ಈಚೆಗಷ್ಟೇ ಆದಾಯ ತೆರಿಗೆ ಇಲಾಖೆ (ಐಟಿ) ಮತ್ತೆ ಶಾಕ್ ನೀಡಿತ್ತು. ಇದೀಗ ಕರ್ನಾಟಕ ಲೋಕಾಯುಕ್ತದಿಂದ ನೋಟಿಸ್ ಜಾರಿಯಾಗಿದೆ. 2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ನಡುವೆ ಆದಾಯಕ್ಕಿಂತ ಹೆಚ್ಚು ಅಂದರೆ, 74.93 ಕೋಟಿ ರೂ. ಮೌಲ್ಯದ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಮಾಹಿತಿ ಹಾಗೂ ದಾಖಲಾತಿಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ವಿಭಾಗದಿಂದ ನೋಟಿಸ್ ಜಾರಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖಾಧಿಕಾರಿಗಳಿಗೆ ನೀಡಲಾಗಿದ್ದ ಮಾಹಿತಿ ಮತ್ತು ದಾಖಲಾತಿಗಳನ್ನು ನೀಡುವಂತೆ ನೋಟಿಸ್‌ನಲ್ಲಿ ನಿರ್ದೇಶಿಸಲಾಗಿದೆ.

ಸರ್ಕಾರದಿಂದ ಸಿಬಿಐ ತನಿಖೆ ರದ್ದು

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವುದಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆದಿತ್ತು. ಆದರೆ. ಈಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಮಂಡಿಸಿ, ಡಿ.ಕೆ ಶಿವಕುಮಾರ್ ಅವರ ಮೇಲಿದ್ದ ಸಿಬಿಐ ತನಿಖೆಯನ್ನು ರದ್ದುಪಡಿಸಿ, ಈ ತನಿಖೆಯನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಇದೀಗ ನೋಟಿಸ್‌ ಜಾರಿ ಮಾಡಲಾಗಿದೆ.

Read More
Next Story