Constitution Day |ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಅರಿವು ಅವಶ್ಯಕ: ಸಿಎಂ ಸಿದ್ದರಾಮಯ್ಯ
x
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ದಿನದ ಅಂಗವಾಗಿ ಅಂಬೇಡ್ಕರ್‌ ಪ್ರತಿಮೆಗೆ ಪುಪ್ಪನಮನ ಸಲ್ಲಿಸಿದರು.

Constitution Day |ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಅರಿವು ಅವಶ್ಯಕ: ಸಿಎಂ ಸಿದ್ದರಾಮಯ್ಯ

ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಅವಶ್ಯ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


Click the Play button to hear this message in audio format

ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಅದು ನಿಗದಿ ಮಾಡಿರುವ ನಮ್ಮ ಕರ್ತವ್ಯ ಮತ್ತು ಭಾದ್ಯತೆಗಳನ್ನು ಚಾಚೂ ತಪ್ಪದೇ ಪಾಲಿಸುವುದೂ ಅವಶ್ಯ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. ಕೇಂದ್ರ , ರಾಜ್ಯ ಸರ್ಕಾರಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳು ಸಂವಿಧಾನದಂತೆ ನಡೆದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತೆ ಕೆಲಸ ಮಾಡಬೇಕು. ಆದ್ದರಿಂದ ರಾಜ್ಯದ ಎಲ್ಲಾ ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿ, ಅದರ ಆಶಯಗಳನ್ನು ವಿದ್ಯಾರ್ಥಿಗಳು ಮನನ ಮಾಡಿಕೊಳ್ಳಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಸಂವಿಧಾನ ರಕ್ಷಿಸುವ ಕಾರ್ಯ ಮಾಡುತ್ತಿದೆ

ಸಂವಿಧಾನವನ್ನು ತಿದ್ದುಪಡಿ ಮಾಡಲಾಗುವುದು ಎಂಬ ಬಿಜೆಪಿಯವರ ಧೋರಣೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿ.ಎಂ, ಸಂವಿಧಾನಕ್ಕೆ ವಿರೋಧವಾಗಿರುವವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳೂ ಸಹ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು ಎಂದರು.

Read More
Next Story