ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್ ಬಚ್ಚೇಗೌಡ ರಾಜಿನಾಮೆ
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಬಚ್ಚೇಗೌಡ, ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಪಕ್ಷದ ಪರ ಕೆಲಸ ಮಾಡದಿರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ: ಚುನಾವಣಾ ರಾಜಕಾರಣದಿಂದ ದೂರ ಉಳಿಯುವುದಾಗಿ ಘೋಷಿಸಿದ್ದ ಸಂಸದ ಬಿ.ಎನ್. ಬಚ್ಚೇಗೌಡ ಅವರು ಬಿಜೆಪಿ ತೊರೆದಿದ್ದಾರೆ.
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಬಚ್ಚೇಗೌಡ ಅವರು ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಪಕ್ಷದ ಪರ ಕೆಲಸ ಮಾಡದಿರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೂರು ದಿನಗಳ ಹಿಂದೆಯೇ (ಮಾ. 18) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಬಚ್ಚೇಗೌಡ ಅವರು, ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
“2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ” ಎಂದು ಅವರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.
Next Story