ಹಿಂದುಳಿದ ವರ್ಗ, ದಲಿತ ಮತ್ತು ಶೋಷಿತ ಸಮುದಾಯಗಳ ಸ್ವಾಮೀಜಿಗಳಿಂದ ಸಿದ್ದರಾಮಯ್ಯಗೆ ಬೆಂಬಲ
x

ಹಿಂದುಳಿದ ವರ್ಗ, ದಲಿತ ಮತ್ತು ಶೋಷಿತ ಸಮುದಾಯಗಳ ಸ್ವಾಮೀಜಿಗಳಿಂದ ಸಿದ್ದರಾಮಯ್ಯಗೆ ಬೆಂಬಲ

ಮುಡಾ ಪ್ರಕರಣ ಸಂಬಂಧ ರಾಜಭವನದ ಕ್ರಮವನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು ಈ ಷಡ್ಯಂತ್ರದ ವಿರುದ್ಧ ಒಕ್ಕೊರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.


ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಹಾಗೂ ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್‌ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.

ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದ ಸ್ವಾಮೀಜಿಗಳು ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.

ನಿಯೋಗದಲ್ಲಿ ಕನಕ ಪೀಠ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಮಹಾಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಶಾಂತವೀರ ಮಹಾಸ್ವಾಮಿ, ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿ, ಚಿತ್ರದುರ್ಗ ಮಾದರ ಚನ್ನಯ ಗುರುಪೀಠದ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿ, , ಮಧುರೆ ಭಗೀರಥ ಫೀಠದ ಪುರುಷೋತ್ತಮಾನಂದಪುರಿ ಮಹಾಸ್ವಾಮಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಮಹಾಸ್ವಾಮಿಗಳು , ಶಿವಮೊಗ್ಗ ನಾರಾಯಣ ಗುರುಪೀಠದ ರೇಣುಕಾನಂದ ಸ್ವಾಮಿ, ಚಿತ್ರದುರ್ಗ ಮಡಿವಾಳ ಗುರುಫೀಠದ ಬಸವ ಮಾಚಿದೇವ ಮಹಾಸ್ವಾಮಿ, ತಂಗಡಗಿ ಹಡಪದ ಅಪ್ಪಣಣ ಗುರುಪೀಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿ, ವಿಜಯನಗರ ಸರೂರು ಮಠದ ಶಾಂತಮ್ಮಯ್ಯ ಸ್ವಾಮೀಜಿ ನಿಯೋಗದಲ್ಲಿದ್ದರು.

Read More
Next Story