ಟೆಕ್ಕಿ ಆತ್ಮಹತ್ಯೆ ಪ್ರಕರಣ | ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
x
ಟೆಕ್ಕಿ ಆತ್ಮಹತ್ಯೆ ಪ್ರಕರಣ ಆರೋಪಿಗಳು

ಟೆಕ್ಕಿ ಆತ್ಮಹತ್ಯೆ ಪ್ರಕರಣ | ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಪತ್ನಿಯ ಕಿರುಕುಳದಿಂದ ಮನನೊಂದು ಟೆಕ್ಕಿ ಅತುಲ್ ಸುಭಾಷ್ ತಾವು ವಾಸವಿದ್ದ ಮಾರತ್ತಹಳ್ಳಿ ಸಮೀಪದ ಮಂಜುನಾಥ ಲೇಔಟ್ ಅಪಾರ್ಟ್ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.


ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ, ಬಾಮೈದ ಅನುರಾಗ್ ಸಿಂಘಾನಿಯಾಗೆ ಬೆಂಗಳೂರಿನ 29ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪತ್ನಿಯ ಕಿರುಕುಳದಿಂದ ಮನನೊಂದು ಟೆಕ್ಕಿ ಅತುಲ್ ಸುಭಾಷ್ ತಾವು ವಾಸವಿದ್ದ ಮಾರತ್ತಹಳ್ಳಿ ಸಮೀಪದ ಮಂಜುನಾಥ ಲೇಔಟ್ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಅತುಲ್ ಸುಭಾಷ್ ಸೋದರ ವಿಕಾಸ್ ನೀಡಿದ್ದ ದೂರಿನ ಆಧಾರದ ಮೇಲೆ ನಿಖಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಹಾಗೂ ಸೋದರ ಅನುರಾಗ್ ಸಿಂಘಾನಿಯಾ ವಿರುದ್ಧ ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಬೆಂಗಳೂರು ಪೊಲೀಸರು ಆರೋಪಿಗಳನ್ನು ಉತ್ತರಪ್ರದೇಶದ ಪ್ರಯಾಗ್ ರಾಜ್ ಹಾಗೂ ಹರಿಯಾಣದ ಗುರುಗ್ರಾಮದಲ್ಲಿ ಬಂಧಿಸಿ, ಕರೆತಂದಿದ್ದರು.

ಆರೋಪಿಗಳ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆ ಏನು?

ಅತುಲ್ ಸುಭಾಷ್ ವಿರುದ್ಧ ಪತ್ನಿ ಉತ್ತರಪ್ರದೇಶದ ನ್ಯಾಯಾಲಯದಲ್ಲಿ 9 ಪ್ರಕರಣಗಳನ್ನು ದಾಖಲಿಸಿದ್ದರು. ಪ್ರಕರಣ ಹಿಂಪಡೆಯಲು 3 ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಅತುಲ್ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು. ಅಲ್ಲದೇ ನ್ಯಾಯಾಧೀಶರ ವಿರುದ್ಧವೂ ಗಂಭೀರ ಆಪಾದನೆ ಮಾಡಿದ್ದರು. ನ್ಯಾಯಾಲಯದಲ್ಲಿ ತಮಗೆ ನ್ಯಾಯ ಸಿಕ್ಕಿಲ್ಲ ಎಂದು ಹತಾಶರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

Read More
Next Story