
ಅಶ್ಲೀಲ ವಿಡಿಯೋ ಹಂಚಿದ ಆರೋಪಿಗಳಾದ ಚೇತನ್, ಲಿಖಿತ್‌ಗೆ ಜಾಮೀನು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡ ಪ್ರಕರಣದಲ್ಲಿ ಆರೋಪಿಗಳಾಗಿರುವ ಚೇತನ್ ಹಾಗೂ ಲಿಖಿತ್ ಗೌಡ ಎಂಬವರಿಗೆ ಜಾಮೀನು ಮಂಜೂರಾಗಿದೆ.
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡ ಪ್ರಕರಣದಲ್ಲಿ ಆರೋಪಿಗಳಾಗಿರುವ ಚೇತನ್ ಹಾಗೂ ಲಿಖಿತ್ ಗೌಡ ಎಂಬವರಿಗೆ ಜಾಮೀನು ಮಂಜೂರಾಗಿದೆ. ಹಾಸನದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಇಬ್ಬರಿಗೂ ಜಾಮೀನು ಮಂಜೂರು ದೊರೆತಿದೆ.
ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇವರಿಬ್ಬರೂ ಆರನೇ ಮತ್ತು ಏಳನೇ ಆರೋಪಿಗಳಾಗಿದ್ದಾರೆ. ಯಲಗುಂದ ಚೇತನ್ ಹಾಗೂ ಲಿಖಿತ್ ಗೌಡ ಇವರಿಬ್ಬರೂ ಶಾಸಕ ಪ್ರೀತಂ ಗೌಡ ಅವರ ಆಪ್ತರೂ ಆಗಿದ್ದಾರೆ. ವಿಡಿಯೋದಲ್ಲಿರುವ ಮಹಿಳೆಯರ ಗುರುತು ಮರೆಮಾಚದೆ ಹಂಚಿದ ಆರೋಪ ಇವರ ಮೇಲಿದೆ.
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಅನ್ನು ಹಂಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚೇತನ್ ಗೌಡ ಮತ್ತು ಮತ್ತು ನವೀನ್ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ನವೀನ್ ಗೌಡ ಹಾಗೂ ಚೇತನ್‌ನನ್ನು ಮೂರು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಜೂನ್ 1 ರಂದು ಶನಿವಾರ ಸಂಜೆ 4.30ಕ್ಕೆ ಆರೋಪಗಳನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸಲು ಸೂಚಿಸಲಾಗಿದೆ. ಇಂದಿನಿಂದ ಜೂನ್ 1 ರವರೆಗೆ ನವೀನ್ ಹಾಗೂ ಚೇತನ್ ಎಸ್ಐಟಿ ಕಸ್ಟಡಿಗೆ ನೀಡಿ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.
ಇನ್ನು ಪ್ರಜ್ವಲ್ ರೇವಣ್ಣನವರ ಬಂಧನಕ್ಕೆ ಆಗ್ರಹಿಸಿ ಇಂದು ಹಾಸನದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರಜ್ವಲ್ ರೇವಣ್ಣ ಜೊತೆಗೆ ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದವರನ್ನೂ ಬಂಧನದಲ್ಲಿಡಬೇಕು ಎಂದು ಮಹಿಳಾ ಹೋರಾಟಗಾರರು ಆಗ್ರಹಿಸಿ ಇಂದು ಹಾಸನದಲ್ಲಿ ಪ್ರತಿಭಟನೆ ನಡೆಸಿದ್ದರು.
ಇನ್ನು ಹಾಲಿ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ದೇಶವನ್ನು ತೊರೆದಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಹಲವು ಬಾರಿ ವಿಚಾರಣೆಗೆ ಹಾಜರಾಗಲು ಸಮನ್ಸ್‌ಗಳನ್ನು ನೀಡಿದೆಯಾದರೂ, ಪ್ರಜ್ವಲ್ ರೇವಣ್ಣ ವಿಚಾರಣೆಯಿಂದ ಸತತವಾಗಿ ತಪ್ಪಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯ ಪ್ರಜ್ವಲ್ ಅವರಿಗೆ ಶೋಕಾಸ್ ನೋಟಿಸ್ ಅನ್ನು ಜಾರಿಗೊಳಿಸಿದ ಬೆನ್ನಲ್ಲೆ ಅವರು ಈ ವಿಡಿಯೋ ಸಂದೇಶವನ್ನು ರವಾನೆ ಮಾಡಿ ಮೇ 31ರಂದು ಬೆಂಗಳೂರಿನಲ್ಲಿ ನಡೆಯುವ ಎಸ್‌ಐಟಿ ತನಿಖೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.