ಬೆಂಗಳೂರು | ಅಗ್ನಿ ಅವಘಡ: 11ಕ್ಕೂ ಹೆಚ್ಚು ಮಂದಿ ರಕ್ಷಣೆ
x

ಬೆಂಗಳೂರು | ಅಗ್ನಿ ಅವಘಡ: 11ಕ್ಕೂ ಹೆಚ್ಚು ಮಂದಿ ರಕ್ಷಣೆ

ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ಸಿಲುಕಿದ್ದವರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.


ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಕಟ್ಟಡದಲ್ಲಿ 30 ಕ್ಕೂ ಅಧಿಕ ಉದ್ಯೋಗಿಗಳು ಕೆಲಸ ಮಾಡುತ್ತಿದ್ದರು. ಅದರಲ್ಲಿ 11 ಮಂದಿ ಕಟ್ಟಡದೊಳಗೆ ಸಿಲುಕಿ ಬಿದ್ದಿದ್ದರು ಎಂದು ತಿಳಿದು ಬಂದಿದೆ. ಕಟ್ಟಡದ ನೆಲಮಹಡಿಯಲ್ಲಿ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ನಂತರ ಅಗ್ನಿ ಇತರೆಡೆಗೆ ಹಬ್ಬಿದೆ.

ದಟ್ಟ ಹೊಗೆಯಿಂದ ಕಂಗಾಲಾದ ಸಿಬ್ಬಂದಿಗಳು ಹೊರ ಬರಲು ಪರದಾಡಿದ್ದಾರೆ. ಅಗ್ನಿ ಶಾಮಕ ದಳ ಸಿಬ್ಬಂದಿ ಕೆಲವರನ್ನು ರಕ್ಷಣೆ ಮಾಡಿದ್ದಾರೆ. ಬೆಂಕಿ ಆವರಿಸಿದ ಕಟ್ಟಡದಲ್ಲಿ ಸಿಲುಕಿದವರನ್ನು ಏಣಿ ಮೂಲಕ ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ.

ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಅದಾಗ್ಯೂ, ಕೆಲವರಿಗೆ ಬೆಂಕಿಯ ಹೊಗೆಯಿಂದ ಉಸಿರಾಟದ ಸಮಸ್ಯೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕಾಗಮಿಸಿದ ಸಚಿವ ಬೈರತಿ ಸುರೇಶ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಂದ ಯಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಧ್ಯಾಹ್ನ 12.45ರ ಸಮಯದಲ್ಲಿ ಅಗ್ನಿ ದುರಂತ ಆಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಆಗಿದೆ ಎಂದು ತಿಳಿದು ಬಂದಿದೆ. ಎಲೆಕ್ಟ್ರಿಕ್ ತಜ್ಞರಿಂದ ವರದಿ ಕೇಳಿದ್ದೇವೆ ಎಂದು ತಿಳಿಸಿದ್ದಾರೆ.

Read More
Next Story