ಬಂಟ್ವಾಳ | ದುಷ್ಕರ್ಮಿಗಳಿಂದ ಯುವಕನ ಹತ್ಯೆ; ಆರೋಪಿಗಳಿಗಾಗಿ ಪೊಲೀಸರಿಂದ ಶೋಧ
x

ಬಂಟ್ವಾಳ | ದುಷ್ಕರ್ಮಿಗಳಿಂದ ಯುವಕನ ಹತ್ಯೆ; ಆರೋಪಿಗಳಿಗಾಗಿ ಪೊಲೀಸರಿಂದ ಶೋಧ

ಘಟನೆಯಲ್ಲಿ ಕೊಳತ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್‌ ರಹಿಮಾನ್‌ ಮೃತಪಟ್ಟಿದ್ದು ಗಾಯಗೊಂಡ ಯುವಕನನ್ನು ಕಲಂದರ್‌ ಶಾಫಿ ಎಂದು ಗುರುತಿಸಲಾಗಿದೆ. ಇಬ್ಬರೂ ಪಿಕ್‌ಆಪ್‌ ವಾಹನದಲ್ಲಿ ಮರಳು ಅನ್‌ಲೋಡ್‌ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿದ್ದಾರೆ ಎನ್ನಲಾಗಿದೆ.


ಮಂಗಳೂರಿನ ಬಂಟ್ವಾಳ ತಾಲೂಕಿನ ಕೊಳತ್ತಮಜಲು ಗ್ರಾಮದಲ್ಲಿ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿರುವ ಟನೆ ಮಂಗಳವಾರ ನಡೆದಿದೆ.

ಕೊಳತ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್‌ ರಹಿಮಾನ್‌ ಎಂಬ ಯುವಕ ದುಷ್ಕರ್ಮಿಗಳ ದಾಳಿಯಿಂದ ಮೃತಪಟ್ಟಿದ್ದಾರೆ. ಗಾಯಾಳು ಯುವಕನನ್ನು ಕಲಂದರ್‌ ಶಾಫಿ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರೂ ಪಿಕ್‌ಆಪ್‌ ವಾಹನದಲ್ಲಿ ಮರಳು ಅನ್‌ಲೋಡ್‌ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ತಲವಾರ್‌ನಿಂದ ದಿಢೀರ್‌ ದಾಳಿ ಮಾಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಖಂಡನೆ

ಬಂಟ್ವಾಳದ ಕೊಳತ್ತುಮಜುಲುವಿನಲ್ಲಿ ನಡೆದ ಯುವಕನ ಹತ್ಯೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಖಂಡಿಸಿದ್ದಾರೆ. ಘಟನೆ ಬೆನ್ನಲ್ಲೆ ಹಿರಿಯ ಪೊಲೀಸ್‌ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ತಾಕೀತು ಮಾಡಿದ್ದಾರೆ.

Read More
Next Story