
ಡಿ.ಕೆ.ಶಿವಕುಮಾರ್
BBMP Election | ಬಿಬಿಎಂಪಿಗೆ ಶೀಘ್ರ ಚುನಾವಣೆ; ಡಿ.ಕೆ. ಶಿವಕುಮಾರ್ ಭರವಸೆ
'ಬಿಬಿಎಂಪಿ ಚುನಾವಣೆಯಿಂದ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಶೀಘ್ರವೇ ಬಿಬಿಎಂಪಿಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಶನಿವಾರ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
'ಬಿಬಿಎಂಪಿ ಚುನಾವಣೆಯಿಂದ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಶೀಘ್ರವೇ ಬಿಬಿಎಂಪಿಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಬಿಬಿಎಂಪಿಗೆ ಚುನಾವಣೆ ನಡೆದು ಪಾಲಿಕೆ ಸದಸ್ಯರು ಆಯ್ಕೆಯಾದರೆ ಶಾಸಕರಿಗೆ ಬೆಲೆ ಇರುವುದಿಲ್ಲ ಎಂಬ ಭಾವಿಸಿ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳೇ ಚುನಾವಣೆ ನಡೆಯದಂತೆ ನೋಡಿಕೊಂಡಿವೆ ಎನ್ನಲಾಗಿದೆ. ಮತ್ತೊಂದೆಡೆ ಕ್ಷೇತ್ರ ಪುನರ್ವಿಂಗಡಣೆ ಕೂಡ ಚುನಾವಣೆ ವಿಳಂಬಕ್ಕೆ ಕಾರಣವಾಗಿತ್ತು.
ಚುನಾವಣೆ ಮತ್ತಷ್ಟು ವಿಳಂಬ
ಬಿಬಿಎಂಪಿಯನ್ನು ವಿಭಜಿಸುವ ಕುರಿತು ಗ್ರೇಟರ್ ಬೆಂಗಳೂರು ವಿಧೇಯಕ ಅಂಗೀಕಾರವಾಗಿದ್ದು, ಇದರಿಂದಲೂ ಬಿಬಿಎಂಪಿ ಚುನಾವಣೆ ಮತ್ತಷ್ಟು ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ.
ಗ್ರೇಟರ್ ಬೆಂಗಳೂರು ಮಸೂದೆಯು ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಮಸೂದೆಗೆ ರಾಜ್ಯಪಾಲರ ಒಪ್ಪಿಗೆ ದೊರೆತರೆ ಬಿಬಿಎಂಪಿಯನ್ನು ಏಳು ಭಾಗಗಳಾಗಿ ವಿಭಜಿಸಲಾಗುವುದು. ಇದರಿಂದ ಚುನಾವಣೆ ಸಾಕಷ್ಟು ವಿಳಂಬವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ಶಾಸಕರಿಗೂ ಬಿಬಿಎಂಪಿ ಚುನಾವಣೆ ಬೇಡವಾಗಿದೆ. ಇದರಿಂದ ಬೆಂಗಳೂರಿನ ಅಭಿವೃದ್ಧಿ ಹಿಂದುಳಿದಿದ್ದು, ನಗರದ ಅಭಿವೃದ್ಧಿಯ ವೇಗ ಹೆಚ್ಚಿಸಲು ತ್ವರಿತವಾಗಿ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಜುಲೈ ತಿಂಗಳಲ್ಲಿ ಚುನಾವಣೆ?
ಜೂನ್ 30 ರೊಳಗೆ ವಾರ್ಡ್‌ಗಳ ಗಡಿ ಗುರುತಿಸಿ, ಹೊಸ ಪಾಲಿಕೆ ಹಾಗೂ ವಾರ್ಡ್‌ಗಳನ್ನು ರಚಿಸಬೇಕಿದೆ. ಮೀಸಲಾತಿ ನಿಗದಿ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡರೆ ಬರುವ ಜುಲೈ ತಿಂಗಳಿನಲ್ಲಿಯೇ ಪಾಲಿಕೆ ಚುನಾವಣೆ ನಡೆಸಬಹುದು ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಹೇಳುತ್ತಿದ್ದಾರೆ. ಈಗ ಗ್ರೇಟರ್ ಬೆಂಗಳೂರು ವಿಧೇಯಕ ಅಂಗೀಕಾರವಾಗಿದ್ದು, ಪಾಲಿಕೆ ವಿಭಜನೆ ಆಗುತ್ತಿದ್ದಂತೆ ಚುನಾವಣೆಗೆ ತಯಾರಿ ನಡೆಸಲಿದೆ ಎಂದು ಹೇಳಲಾಗಿದೆ.