ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ!: ಲೋಕಾಯುಕ್ತ ತನಿಖೆ
x

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ!: ಲೋಕಾಯುಕ್ತ ತನಿಖೆ


ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾದರಿಯಲ್ಲೇ ಬಿಬಿಎಂಪಿಯಲ್ಲೂ ಕೊರೋನಾ ಅವಧಿಯಲ್ಲಿ ಬಹುಕೋಟಿ ಹಗರಣ ನಡೆದಿರುವುದು ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು 120 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ.

ಬಿಬಿಎಂಪಿಯಲ್ಲಿ ವಾಲ್ಮೀಕಿ ನಿಗಮದ ಹಗರಣಕ್ಕಿಂತ ಬಾರಿ ದೊಡ್ಡ ಹಗರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಕೊರೋನಾ ಸಂದರ್ಭದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ , ಸಹಕಾರಿ ಸಂಘ, ಕೋ ಆಪರೇಟಿವ್‌ ಸೊಸೈಟಿಗಳಿಗೆ ಬಿಬಿಎಂಪಿ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ.

ಈ ಹಗರಣವು ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ನಡೆದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಲಾಗಿದ್ದು ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಎಂದು ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ದೂರಿನಲ್ಲಿ ಅಕ್ರಮವಾಗಿ ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ.

ಅಕ್ರಮ ಹಣ ವರ್ಗಾವಣೆಯಲ್ಲಿ ಸುಬೇಶ್, ಎಸ್.ಎಸ್. ದೇವಕಿ, ಬಿ.ಗಾಯತ್ರಿ, ಜಿ.ಎನ್. ಸುಬ್ಬರಾಮಯ್ಯ, ಎಸ್.ವಿ.ಗಿರಿಯಪ್ಪ, ಎನ್.ಗೀತಾ, ಕುಮಾರಿ ಕುಸುಮಾ, ಲಿಂಗಣ್ಣ ಗುಂಡಳ್ಳಿ, ಸತ್ಯಮೂರ್ತಿ ಎನ್ನುವ ಅಧಿಕಾರಿಗಳ ಹೆಸರು ಕೇಳಿಬಂದಿದೆ.

Read More
Next Story