
ಸಾಂದರ್ಭಿಕ ಚಿತ್ರ
ಬಿಇ, ಬಿಎಸ್‌ಸಿ, ಬಿಕಾಂ ಪದವೀಧರರಿಗೆ ಗುಡ್ ನ್ಯೂಸ್; ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಉದ್ಯೋಗಾವಕಾಶ
ನ.14 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿ ಹಾಗೂ ಅರ್ಜಿ ಸಲ್ಲಿಸಲು ಡಿ.14 ಕೊನೆಯ ದಿನಾಂಕವಾಗಿದೆ. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗದು.
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ವೃಂದಗಳ 194 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನ.14 ರಿಂದ ಅವಕಾಶ ನೀಡಲಾಗಿದೆ. ಶುಲ್ಕ ಪಾವತಿ ಹಾಗೂ ಅರ್ಜಿ ಸಲ್ಲಿಸಲು ಡಿಸೆಂಬರ್ 14 ಕೊನೆಯ ದಿನಾಂಕವಾಗಿದೆ. ಒಮ್ಮೆ ಶುಲ್ಕ ಪಾವತಿಸಿದ ನಂತರ ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಇತರ ಯಾವುದೇ ನೇಮಕಾತಿಗಳಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದಿಲ್ಲ ಎಂದು ಜಿಲ್ಲಾ ಸಹಕಾರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವ್ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಹಾಯಕ ವ್ಯವಸ್ಥಾಪಕರು(ಎಎಚ್, ಆಡಳಿತ, ಎಫ್ ಅಂಡ್ ಎಫ್) ಸಿಸ್ಟಂ ಆಫಿಸರ್, ಮಾರುಕಟ್ಟೆ ಅಧಿಕಾರಿ, ಎಂಜಿನಿಯರ್ (ಮೆಕಾನಿಕಲ್, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್), ತಾಂತ್ರಿಕ ಅಧಿಕಾರಿ (ಕೆಮಿಸ್ಟ್ರಿ, ಮೈಕ್ರೊ ಬಯಾಲಜಿ, ಡಿಟಿ) ಕೆಮಿಸ್ಟ್ -1 (ಕೆಮಿಸ್ಟ್ರಿ, ಮೈಕ್ರೊ ಬಯಾಲಜಿ) ವಿಸ್ತರಣಾಧಿಕಾರಿ, ಆಡಳಿತ ಸಹಾಯಕರು, ಲೆಕ್ಕ ಸಹಾಯಕರು, ಮಾರುಕಟ್ಟೆ ಸಹಾಯಕರು, ಕೆಮಿಸ್ಟ್ ದರ್ಜೆ -2(ಕೆಮಿಸ್ಟ್ರಿ, ಮೈಕ್ರೊ ಬಯಾಲಜಿ) ಕಿರಿಯ ಸಿಸ್ಟಂ ಆಪರೇಟರ್, ಶೀಘ್ರಲಿಪಿಕಾರರು, ಕಿರಿಯ ತಾಂತ್ರಿಕರು (ಎಲೆಕ್ಟ್ರಿಕಲ್, ರೆಫ್ರಿಜರೇಷನ್, ಬಾಯ್ಲರ್ ಅಟೆಂಡೆಂಟ್, ಫಿಟ್ಟರ್, ವೆಲ್ಡರ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 5,00 ರೂ., ಇತರೆ ವರ್ಗದ ಅಭ್ಯರ್ಥಿಗಳಿಗೆ 1,000 ರೂ. ಶುಲ್ಕ ವಿಧಿಸಲಾಗಿದೆ. ತಪ್ಪು ಮಾಹಿತಿ ಹಾಗೂ ಅಸ್ಪಷ್ಟ ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಲು ಇಚ್ಛಿಸಿದಲ್ಲಿ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಪ್ರತ್ಯೇಕ ಅರ್ಜಿ ಶುಲ್ಕ ಪಾವತಿಸಬೇಕು.
ವಯೋಮಿತಿ
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು. ರಾಜ್ಯ ಸರ್ಕಾರದ ವಯೋಮಿತಿ ಆದೇಶದ ಹೆಚ್ಚಳದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ 43 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 41 ವರ್ಷ ಮತ್ತು ಸಾಮನ್ಯ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಮಾಹಿತಿ, ವೇತನ ಹಾಗೂ ಇತರೆ ಸಂಬಂಧಿತ ವಿಷಯಗಳಿಗೆ ಶಿವಮೊಗ್ಗ ಹಾಲು ಒಕ್ಕೂಟದ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9535165947 ಗೆ ಸಂಪರ್ಕಿಸಬಹುದಾಗಿದೆ.

