ಕುಡಿದು ವಾಹನ ಚಾಲನೆ | ಆಗಸ್ಟ್‌ನಲ್ಲಿ 2,030 ಪ್ರಕರಣ ದಾಖಲು
x
ಕುಡಿದು ವಾಹನ ಚಲಾಯಿಸುವವರ ವಿರುದ್ಧ ಒಟ್ಟು 1,707 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕುಡಿದು ವಾಹನ ಚಾಲನೆ | ಆಗಸ್ಟ್‌ನಲ್ಲಿ 2,030 ಪ್ರಕರಣ ದಾಖಲು

ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಆಗಸ್ಟ್ ಕೊನೆಯ ವಾರದಲ್ಲಿ ನಡೆಸಿದ ವಿಶೇಷ ಅಭಿಯಾನದಲ್ಲಿ ನಗರದಾದ್ಯಂತ ಕುಡಿದು ವಾಹನ ಚಲಾಯಿಸುವವರ ವಿರುದ್ಧ ಒಟ್ಟು 1,707 ಪ್ರಕರಣಗಳನ್ನು ದಾಖಲಿಸಿದ್ದಾರೆ.


Click the Play button to hear this message in audio format

ಕುಡಿದು ವಾಹನ ಚಾಲನೆ ಮಾಡುವವರ ವಿರುದ್ದ ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಆಗಸ್ಟ್ ಕೊನೆಯ ವಾರದಲ್ಲಿ ನಡೆಸಿದ ವಿಶೇಷ ಅಭಿಯಾನದಲ್ಲಿ ನಗರದಾದ್ಯಂತ ಕುಡಿದು ವಾಹನ ಚಲಾಯಿಸುವವರ ವಿರುದ್ಧ ಒಟ್ಟು 1,707 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಡ್ರಿಂಕ್‌ ಅಂಡ್‌ ಡ್ರೈವ್‌ಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಆಗಸ್ಟ್‌ ತಿಂಗಳಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ನಡೆಸಿದ ಕಾರ್ಯಚಾರಣೆಯಲ್ಲಿ ಬರೋಬ್ಬರಿ 1,707 ಜನ ವಾಹನ ಸವಾರರು ಕುಡಿದು ವಾಹನ ಚಲಾಯಿಸಿರುವುದನ್ನು ಪತ್ತೆ ಹಚ್ಚಿದ್ದು, ಒಟ್ಟಾರೆ ಆಗಸ್ಟ್‌ ತಿಂಗಳೊಂದರಲ್ಲೇ ಕುಡಿದು ವಾಹನ ಚಲಾಯಿಸುತ್ತಿದ್ದ 2030 ವಾಹನ ಸವಾರರನ್ನು ಹಿಡಿಯಲಾಗಿದೆ.

ಈಚೆಗೆ ಟ್ರಾಫಿಕ್‌ ವಿಭಾಗದ ಜಂಟಿ ಪೊಲೀಸ್‌ ಆಯುಕ್ತರಾದ ಎಂ.ಎನ್.ಅನುಚೇತ್ ಅವರು, ಬೆಂಗಳೂರು ವ್ಯಾಪ್ತಿಯ 50 ಸಂಚಾರ ಪೊಲೀಸ್‌ ಠಾಣೆಗಳಿಗೆ ಡ್ರಿಂಕ್‌ ಆ್ಯಂಡ್‌ ಡ್ರೈವ್‌ ಬಗ್ಗೆ ಎಚ್ಚರ ವಹಿಸುವಂತೆ ಹೇಳಿದ್ದರು. ಅಲ್ಲದೇ ಕುಡಿದು ವಾಹನ ಚಲಾಯಿಸುವವರನ್ನು ಪತ್ತೆ ಮಾಡಿ, ದಂಡ ವಿಧಿಸುವಂತೆ ಸೂಚನೆ ನೀಡಿದ್ದರು. ಆಗಸ್ಟ್‌ ತಿಂಗಳ ಕೊನೆಯ ವಾರದಲ್ಲಿ ನೀಡಿದ್ದ ಈ ಸೂಚನೆಯ ಬೆನ್ನಲ್ಲೇ ಬೆಂಗಳೂರಿನ ಟ್ರಾಫಿಕ್‌ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.

ರಾತ್ರಿ ಪಾಳಿಯಲ್ಲಿ ಒಬ್ಬರು ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಮತ್ತು ಒಬ್ಬ ಮಹಿಳಾ ಹೆಡ್ ಕಾನ್‌ಸ್ಟೇಬಲ್ ಅವರನ್ನು ಕಾರ್ಯಾಚರಣೆಗೆ ಇಳಿಸಲು ಎಂ.ಎನ್.ಅನುಚೇತ್ ಅವರು ಎಲ್ಲಾ ಠಾಣೆಗಳಿಗೆ ಮಾಹಿತಿ ನೀಡಿದ್ದಾರೆ.

"ಕಳೆದ ಶನಿವಾರ, ಸುಮಾರು 37,000 ವಾಹನಗಳನ್ನು ಪರಿಶೀಲಿಸಲಾಗಿದೆ ಮತ್ತು 624 ಪ್ರಕರಣಗಳನ್ನು ದಾಖಲಿಸಲಾಗಿದೆ, ಇದು ಶೇಕಡಾ 2 ಕ್ಕಿಂತ ಕಡಿಮೆಯಾಗಿದೆ. ನಾವು ಕಳೆದ ನಾಲ್ಕೈದು ತಿಂಗಳಿನಿಂದ ನಿರಂತರವಾಗಿ ಶೇಕಡಾ ಎರಡರಲ್ಲಿ ಉಳಿದಿದ್ದೇವೆ, ಅದು ಒಳ್ಳೆಯದು" ಎಂದು ಅನುಚೇತ್ ಮಾಹಿತಿ ನೀಡಿದ್ದಾರೆ.

Read More
Next Story