ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ವಾಟ್ಸ್​ಆ್ಯಪ್​ನಲ್ಲೇ ಕಳುಹಿಸಲು ಸಹಾಯವಾಣಿ ಆರಂಭಿಸಿದ ಬೆಸ್ಕಾಂ
x

ಬೆಸ್ಕಾಂ

ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ವಾಟ್ಸ್​ಆ್ಯಪ್​ನಲ್ಲೇ ಕಳುಹಿಸಲು ಸಹಾಯವಾಣಿ ಆರಂಭಿಸಿದ ಬೆಸ್ಕಾಂ

ಬೆಸ್ಕಾಂ ವ್ಯಾಪ್ತಿಯ ಎಲ್ಲ ವಲಯಗಳಲ್ಲಿ ವಾಟ್ಸ್​ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದ್ದು, ಆ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​​ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ.


ಗ್ರಾಹಕರ ಸಮಸ್ಯಗಳಿಗೆ ಶೀಘ್ರದಲ್ಲೇ ಸ್ಪಂದಿಸುವ ನಿಟ್ಟಿನಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ -BESCOM) ವಾಟ್ಸ್​ಆ್ಯಪ್ ಸಹಾಯವಾಣಿ ಆರಂಭಿಸಿದೆ.

ಬೆಸ್ಕಾಂ ವ್ಯಾಪ್ತಿಯ ಎಲ್ಲ ವಲಯಗಳಲ್ಲಿ ವಾಟ್ಸ್​ಆ್ಯಪ್ ಸಹಾಯವಾಣಿ ಆರಂಭಿಸಲಾಗಿದ್ದು, ಆ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​​ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ.

‘ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹಾರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ’ ಎಂದು ಎಕ್ಸ್​ ಸಂದೇಶದಲ್ಲಿ ಬೆಸ್ಕಾಂ ಮನವಿ ಮಾಡಿದೆ.

ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗಳಿಗೂ ವಿಶೇಷ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳಿದ್ದು, ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ, ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹಾರ ಪಡೆಯಿರಿ ಎಂದು ಬೆಸ್ಕಾಂ ಗ್ರಾಹಕರಿಗೆ ಸಲಹೆ ನೀಡಿದೆ.

ಬೆಸ್ಕಾಂ ವ್ಯಾಪ್ತಿಗೆ ಬರುವ ಜಿಲ್ಲೆಗಳು

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಚಿತ್ರದರ್ಗ ಮತ್ತು ದಾವಣಗೆರೆ ಈ ಎಂಟು ಜಿಲ್ಲೆಗಳು ಬೆಸ್ಕಾಂ ವ್ಯಾಪ್ತಿಗೆ ಬರುತ್ತವೆ.

ಪ್ರಧಾನ ಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆಯೂ ಗ್ರಾಹಕರಿಗೆ ಬೆಸ್ಕಾಂ ಮನವಿ ಮಾಡಿದೆ. ಸೂರ್ಯಘರ್ ಯೋಜನೆಯ ಮೂಲಕ ನಿಮ್ಮ ಮನೆ ಮೇಲ್ಛಾವಣಿಯಲ್ಲಿ ಸೌರವಿದ್ಯುತ್ ಘಟಕ ಸ್ಥಾಪಿಸಿ ಆಕರ್ಷಕ ಸಬ್ಸಿಡಿ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಸೂರ್ಯಘರ್ ಯೋಜನೆಗೆ ಈ ಲಿಂಕ್ ಮೂಲಕ https://pmsuryaghar.gov.in ನೋಂದಾಯಿಸಿಕೊಳ್ಳಿ ಎಂದು ಬೆಸ್ಕಾಂ ಕೇಳಿಕೊಂಡಿದೆ.

Read More
Next Story