ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿಗೆ 10 ಗುಂಟೆ ಜಾಗ ನೀಡಿ: ಸಿ.ಎಂಗೆ ಮನವಿ ಸಲ್ಲಿಸಿದ ಭಾರತಿ ವಿಷ್ಣುವರ್ಧನ್‌
x

ಭಾರತಿ ವಿಷ್ಣುವರ್ಧನ್ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು

ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿಗೆ 10 ಗುಂಟೆ ಜಾಗ ನೀಡಿ: ಸಿ.ಎಂಗೆ ಮನವಿ ಸಲ್ಲಿಸಿದ ಭಾರತಿ ವಿಷ್ಣುವರ್ಧನ್‌

ಅಭಿಮಾನಿಗಳು ಅಭಿಮಾನ್‌ ಸ್ಟುಡಿಯೋಗೆ ಬಂದು ನಮಸ್ಕಾರ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಸಿಎಂ ಬಳಿ ಮನವಿ ಮಾಡಿದ್ದೇವೆ. ಇದು ಅಭಿಮಾನಿಗಳ ಹಿತಕ್ಕಾಗಿ ಮಾಡುತ್ತಿರುವ ನಮ್ಮ ವಿನಂತಿ ಎಂದು ಭಾರತೀ ವಿಷ್ಣುವರ್ಧನ್‌ ತಿಳಿಸಿದ್ದಾರೆ.


ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ನಡೆದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಕನಿಷ್ಠ 10 ಗುಂಟೆ ಜಾಗವನ್ನು ಸ್ಮಾರಕಕ್ಕಾಗಿ ಮೀಸಲಿಡುವಂತೆ ಭಾರತಿ ವಿಷ್ಣುವರ್ಧನ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ವಿಷ್ಣು ಅಳಿಯ ಅನಿರುದ್ಧ್ ಜತ್ಕರ್ ಕೂಡ ಈ ಸಂದರ್ಭದಲ್ಲಿ ಇದ್ದರು.

ಬೆಂಗಳೂರು ವಿಷ್ಣುವರ್ಧನ್ ಅವರ ವೃತ್ತಿಜೀವನವನ್ನು ರೂಪಿಸಿದ ಸ್ಥಳವಾಗಿದೆ. ಅಭಿಮಾನಿಗಳಿಗೆ ಇದು ಭಾವನಾತ್ಮಕವಾಗಿ ಬಹಳ ಮಹತ್ವದ ಸ್ಥಳವಾಗಿದೆ. ಲಕ್ಷಾಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಂತಿಮ ದರ್ಶನಕ್ಕಾಗಿ ಇಲ್ಲಿಗೆ ಬಂದಿದ್ದರು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಭಿಮಾನ್ ಸ್ಟುಡಿಯೋ ಜಾಗವು ಅರಣ್ಯ ಇಲಾಖೆಗೆ ಸೇರಿದೆ ಎಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ, ಸ್ಟುಡಿಯೋ ಆವರಣದಲ್ಲಿ ಸ್ಮಾರಕ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಅಭಿಮಾನಿಗಳು ಸರ್ಕಾರವನ್ನು ಕೋರಿದ್ದಾರೆ. ಇದು ಅಭಿಮಾನಿಗಳ ಭಾವನೆಗಳಿಗೆ ಗೌರವ ನೀಡುವ ಜೊತೆಗೆ, ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವ ಶಾಶ್ವತ ಸಾಂಸ್ಕೃತಿಕ ಸ್ಮಾರಕವಾಗಿ ಉಳಿಯುತ್ತದೆ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಸಿ.ಎಂಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಭಾರತೀ ವಿಷ್ಣುವರ್ಧನ್‌, ಅಭಿಮಾನಿಗಳು ಸ್ಟುಡಿಯೋಗೆ ಬಂದು ನಮಸ್ಕಾರ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಸಿಎಂ ಬಳಿ ಮನವಿ ಮಾಡಿದ್ದೇವೆ. ಇದು ಅಭಿಮಾನಿಗಳ ಹಿತಕ್ಕಾಗಿ ಮಾಡುತ್ತಿರುವ ನಮ್ಮ ವಿನಂತಿ ಎಂದು ತಿಳಿಸಿದರು.

ವಿಷ್ಣುವರ್ಧನ್​ಗೆ ಕರ್ನಾಟಕ ರತ್ನ ಕೊಡಬೇಕು ಎಂಬುದು ಹಲವು ವರ್ಷಗಳಿಂದ ಅಭಿಮಾನಿಗಳು ಬೇಡಿಕೆಯನ್ನು ಸರ್ಕಾರದ ಮಂದೆ ಇಡುತ್ತಲೇ ಬರುತ್ತಿದ್ದರು. ‘ಕರ್ನಾಟಕ ರತ್ನ ಕೊಡಬೇಕು ಎಂದು ನಾನು ಕೇಳುವುದಿಲ್ಲ. ಅಭಿಮಾನಿಗಳು ಕೇಳುತ್ತಿದ್ದಾರೆ. ಅವರ ಕೋರಿಕೆಯನ್ನು ಈಡೇರಿಸಬೇಕು’ ಎಂದು ಭಾರತಿ ಸಿಎಂ ಬಳಿ ಹೇಳಿದ್ದಾರೆ.

ಈ ಬಗ್ಗೆ ಅಧಿಕೃತ ಘೋಷಣೆ ಸೆಪ್ಟೆಂಬರ್ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಕ್ಯಾಬಿನೆಟ್ ಸಭೆಯ ನಂತರ ಬಂದ ಸಾಧ್ಯತೆ ಇದೆ.

Read More
Next Story