
Bidadi Township Project | ರೈತರ ಒಂದಿಂಚೂ ಭೂಮಿ ಕಸಿಯಲು ಬಿಡಲ್ಲ: ನಿಖಿಲ್ ಕುಮಾರಸ್ವಾಮಿ
ಶೇ.80ರಷ್ಟು ರೈತರು ಭೂಮಿ ನೀಡುವುದಿಲ್ಲ ಎಂದು ಹೇಳಿದರೂ ರೈತರ ಮೇಲೆ ದಿನನಿತ್ಯ ಅಧಿಕಾರಿಗಳ ಮೂಲಕ ದಬ್ಬಾಳಿಕೆ, ದೌರ್ಜನ್ಯ ಮಾಡುತ್ತಿರುವುದು ಯಾವ ಉದ್ದೇಶಕ್ಕೆ ಎಂದು ನಿಖಿಲ್ ಪ್ರಶ್ನಿಸಿದರು.
ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರೂ ರೈತರಿಂದ ಒಂದಿಂಚೂ ಭೂಮಿ ಕಸಿದುಕೊಳ್ಳಲು ನಾವು ಬಿಡುವುದಿಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ಪಕ್ಷ ಬಿಡದಿ ಹೋಬಳಿಯ ರೈತರ ಪ್ರತಿಭಟನೆಗೆ ಸಾಥ್ ನೀಡಿದೆ.
ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ವಿರೋಧಿಸಿ ರೈತರಿಗೆ ಬೆಂಬಲ ಸೂಚಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್ಕಾರ ಟೌನ್ ಶಿಪ್ ಯೋಜನೆ ಹಿಂಪಡೆಯದಿದ್ದರೆ ಭೈರಮಂಗಲ ಗ್ರಾಮದಿಂದ ಪಾದಯಾತ್ರೆ ಮೂಲಕ ವಿಧಾನಸೌಧ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ನಿಖಿಲ್ ಎಚ್ಚರಿಕೆ ನೀಡಿದರು.
ತೊಡೆ ಮುರಿಯುವುದು ಗೊತ್ತು
ನಮ್ಮ ಹೋರಾಟ ನಿಲ್ಲುವುದಿಲ್ಲ
ರಿಯಲ್ ಎಸ್ಟೇಟ್ ಮಾಫಿಯಾ ನಡೆಸುವುದಕ್ಕಾ.? ಎಂದು ಡಿಸಿಎಂ ಡಿಕೆಶಿ ವಿರುದ್ಧ ಕಿಡಿಕಾರಿದರು.
ರೈತರ ಜಮೀನು ಮಾರಾಟ ಮಾಡದಂತೆ ಆದೇಶ ಮಾಡಿದ್ದೀರಾ? ಅವರ ಮಕ್ಕಳ ಜೀವನಕ್ಕೆ ಏನು ಮಾಡಬೇಕು. ರೈತ ಬೀದಿಗೆ ಬರ್ತಾನೆ, ಅದಕ್ಕೆ ಸಾಮಾಜಿಕ ಸಮೀಕ್ಷೆ ಮಾಡಿದ್ದೀರಾ.? ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಇದ್ದಾರೆ. 10 ಹಳ್ಳಿಗಳ ರೈತರ ಜೊತೆ ಮಾತನಾಡಿದ್ದೀರಾ.? ಎಂದು ಸರ್ಕಾರವನ್ನು ಪ್ರಶ್ನಿಸಿದರು.
ಇದೇ ವೇಳೆ ಕೇಂದ್ರ ಸಚಿವರಾದ ಶ್ರೀ ಕುಮಾರಣ್ಣ ಅವರು ವರ್ಚ್ಯುವಲ್ ಸಭೆ ಮೂಲಕ ರೈತರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ರೈತರು ಎದೆಗುಂದಬೇಡಿ, ನಾನು ನಿಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇನೆ. ಖುದ್ದಾಗಿ ನಾನೇ ಬಂದು ನಿಮ್ಮ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಧೈರ್ಯ ತುಂಬಿದರು.
ನಮ್ಮ ನೀರು ಕಂಡೋರ ಪಾಲಾಗಿದೆ
ಉಪಮುಖ್ಯಮಂತ್ರಿಗಳೇ ಅವತ್ತು ಮೇಕೆದಾಟು ಯೋಜನೆಗೆ ನಮ್ಮ ನೀರು ನಮ್ಮ ಹಕ್ಕು ಎಂದು ತೂರಾಡಿಕೊಂಡು ಹೋಗಿ ಪಾದಯಾತ್ರೆ ಮಾಡಿದ್ದಿರಿ, ಇವತ್ತು ನಮ್ಮ ನೀರು ಕಂಡೋರ ಪಾಲಾಗಿದೆ ಎಂದು ಡಿ.ಕೆ ಶಿವಕುಮಾರ್ ಅವರ ಕಾಲೆಳೆದರು.
ಈ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ ಸುರೇಶ್ ಬಾಬು, ಮಾಜಿ ಶಾಸಕ ಎ. ಮಂಜು, ಡಾ. ಕೆ.ಅನ್ನದಾನಿ, ವಿಧಾನಪರಿಷತ್ ಸದಸ್ಯರಾದ ಟಿ.ಎನ್. ಜವರಾಯಿಗೌಡ, ಟಿ.ಎಸ್. ಶರವಣ, ಮಾಜಿ ವಿಧಾನಪರಿಷತ್ ಸದಸ್ಯರಾದ ಶರಮೇಶ್ ಗೌಡ ಹಾಗೂ ರೈತಪರ ಹೋರಾಟಗಾರರು, ಸ್ಥಳೀಯ ರೈತರು ಉಪಸ್ಥಿತರಿದ್ದರು.