
ಗೋವಿಂದ ರೆಡ್ಡಿ ಬುಧವಾರ ಆದೇಶ ಹೊರಡಿಸಿದ್ದಾರೆ.
ಬೀದರ್ | ರಾಜಕೀಯ ಪಕ್ಷದ ಪರ ಪ್ರಚಾರ: ಆಹಾರ ಶಿರಸ್ತೇದಾರ ಅಮಾನತು
ಸರ್ಕಾರಿ ನೌಕರನಾಗಿ ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಕೈಗೊಂಡು ಅನಿಸಿಕೆ ವ್ಯಕ್ತಪಡಿಸುವುದು ನಿಯಮಬಾಹಿರ.
ಬೀದರ್: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ರಾಜಕೀಯ ಪಕ್ಷವೊಂದರ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಕೈಗೊಂಡಿದ್ದ ಜಿಲ್ಲೆಯ ಔರಾದ್ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೇದಾರ ರವಿ ಸೂರ್ಯವಂಶಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಬುಧವಾರ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ನೌಕರನಾಗಿ ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಕೈಗೊಂಡು ಅನಿಸಿಕೆ ವ್ಯಕ್ತಪಡಿಸುವುದು ನಿಯಮಬಾಹಿರ. ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಕೇಂದ್ರ ಸ್ಥಾನ ಬಿಡತಕ್ಕದಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Next Story