ಜನಿವಾರ ತೆಗೆಸಿದ ಪ್ರಕರಣ | ಬೀದರ್ ಕಾಲೇಜಿನ ಪ್ರಾಂಶುಪಾಲ, ಸಿಬ್ಬಂದಿ ಅಮಾನತು ಮಾಡಿ ಆದೇಶ
x

ಸಾಂಧರ್ಬಿಕ ಚಿತ್ರ

ಜನಿವಾರ ತೆಗೆಸಿದ ಪ್ರಕರಣ | ಬೀದರ್ ಕಾಲೇಜಿನ ಪ್ರಾಂಶುಪಾಲ, ಸಿಬ್ಬಂದಿ ಅಮಾನತು ಮಾಡಿ ಆದೇಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಈ ಸಂಬಂಧ ಬೀದರ್ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದು ಅಧಿಕಾರಿಯದ್ದೇ ತಪ್ಪು ಎಂದು ಉಲ್ಲೇಖಿಸಿದ್ದರು. ಈ ವರದಿ ಆಧಾರದ ಮೇಲೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.


ಜನಿವಾರ ತೆಗೆಯದ ಕಾರಣ ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ಪ್ರಕರಣಕ್ಕೆ ಸಂಬಂಧಿಸಿ ಬೀದರ್ ನ ಸಾಯಿ ಸ್ಫೂರ್ತಿ ಕಾಲೇಜಿನ ಪ್ರಾಂಶುಪಾಲ ಹಾಗೂ ಕೆಲ ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಈ ಸಂಬಂಧ ಬೀದರ್ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದು ಅಧಿಕಾರಿಯದ್ದೇ ತಪ್ಪು ಎಂದು ಉಲ್ಲೇಖಿಸಿದ್ದರು. ಈ ವರದಿ ಆಧಾರದ ಮೇಲೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್​ ಆದೇಶ ಹೊರಡಿಸಿದ್ದಾರೆ.

ಬೀದರ್​ನ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ​ ಚಂದ್ರಶೇಖರ ಬಿರಾದಾರ್ ಹಾಗೂ ಆ ಕಾಲೇಜಿನ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅಮಾನತುಗೊಂಡವರು.

​​ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಈ ಆದೇಶ ಹೊರಡಿಸಲಾಗಿದೆ.

ಜಿಲ್ಲಾಧಿಕಾರಿ ವರದಿಯಲ್ಲಿ ಏನಿತ್ತು?

ಜನಿವಾರ ತೆಗೆಯದ ಕಾರಣ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ವರದಿ ಸಲ್ಲಿಕೆ ಮಾಡಿದ್ದರು.

ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಬಿರಾದಾರ ಹಾಗೂ ಎಸ್ ಡಿ ಎ ಸತೀಶ್ ಅವರು ನಿಯಮಾನುಸಾರ ಕರ್ತವ್ಯ ನಿರ್ವಹಿಸದೇ ಲೋಪ ಎಸಗಿರುವುದು ಕಂಡು ಬಂದಿದೆ. ಅವರನ್ನು ವಜಾಗೊಳಿಸಿ ಅನುಪಾಲನಾ ವರದಿ ಸಲ್ಲಿಸಲು ಸೂಚಿಸಿದ್ದರು. ಇನ್ನು ಪರೀಕ್ಷಾ ವೀಕ್ಷಕರಾಗಿದ್ದ ಔರಾದ್​ ಆರ್ ಎಫ್ ಒ ಮೊದ್ದಶೀರ್ ನಿರ್ಲಕ್ಷ್ಯದಿಂದಾಗಿ ಈ ಆಚಾತುರ್ಯ ನಡೆದಿದೆ. ಅವರಿಗೂ ಕಾರಣ ಕೇಳಿ ನೋಟಿಸ್ಪ ನೀಡಲಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.

ಪರಿಕ್ಷಾರ್ಥಿ ಪರೀಕ್ಷೆಗೆ ಕಾದು ನಿಂತರೂ ಅವಕಾಶ ನೀಡಲಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿಯಮ ಪಾಲಿಸದೇ ಮೊದ್ದಶೀರ್ ಎಡವಟ್ಟು ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖ ಮಾಡಿದ್ದರು.

ಇನ್ನು ಘಟನೆಗೆ ಸಂಬಂಧಿಸಿ ಬ್ರಾಹ್ಮಣ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಈ ಪ್ರಕರಣ ರಾಜಕೀಯವಾಗಿ ಟೀಕೆಗೆ ಒಳಗಾಗಿತ್ತು. ಈ ಹಿನ್ನೆಲೆಯಲ್ಲಿ ಸಾಯಿ ಸ್ಪೂರ್ತಿ ಪಿಯು ಕಾಲೇಜಿನ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ. ಈ ಮಧ್ಯೆ ರಾಜ್ಯ ಸರ್ಕಾರ ಘಟನೆ ಕುರಿತು ತನಿಖೆಗೂ ಅದೇಶಿಸಿದೆ.

ಸ್ವಯಂಪ್ರೇರಿತ ದೂರು ದಾಖಲು

ಜನಿವಾರ ತೆಗೆಯದ ಕಾರಣ ಪರೀಕ್ಷೆಗೆ ಅವಕಾಶ ನೀಡದ ಪ್ರಕರಣ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೀದರ್ ಜಿಲ್ಲಾಡಳಿತದಿಂದ ಮಾಹಿತಿ ಕೋರಿದೆ.

Read More
Next Story