ಪ್ರಜ್ವಲ್‌ಗೆ ಬಿಗ್ ಶಾಕ್ | ಅರೆಸ್ಟ್ ವಾರೆಂಟ್ ಹೊರಡಿಸಿದ ವಿಶೇಷ ನ್ಯಾಯಾಲಯ
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದು, ಇನ್ನು ಸ್ವದೇಶಕ್ಕೆ ಮರಳಿಲ್ಲ. ಈ ಸಂಬಂಧ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿತ್ತು. ಇದೀಗ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟಿದೆ.
ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರ ಬಂಧನಕ್ಕೆ ಶನಿವಾರ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. 11 ದಿನಗಳ ಬಳಿಕ ಅವರಿಗೆ ಜಾಮೀನು ಮಂಜೂರಾಗಿದೆ.
ಪ್ರಜ್ವಲ್ ವಿರುದ್ಧ ಮೂವರು ಮಹಿಳೆಯರು ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್ ಸಹ ದಾಖಲಾಗಿದೆ. ಸದ್ಯ ಬಂಧನಕ್ಕೆ ನೋಟಿಸ್ ಜಾರಿ ಮಾಡಲಾಗಿದ್ದು, ಈ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಮೊನ್ನೆಯಷ್ಟೇ ಭಾರತಕ್ಕೆ ಮರಳಲು ಟಿಕೆಟ್ ಬುಕ್ ಮಾಡಿ, ಮತ್ತೆ ಅದನ್ನು ಕ್ಯಾನ್ಸಲ್ ಮಾಡಿದ್ದಾರೆ ಎಂದು ಸುದ್ದಿಯಾಗಿತ್ತು. ತಲೆಮರಿಸಿಕೊಂಡು ತಿಂಗಳು ಸಮೀಪಿಸುತ್ತಾ ಬಂದರೂ ಇನ್ನೂ ಪ್ರಜ್ವಲ್ ರೇವಣ್ಣ ಪತ್ತೆ ಆಗಿಲ್ಲ.