
ಸಾಂದರ್ಭಿಕ ಚಿತ್ರ
ಚಿಕ್ಕಬಸ್ತಿ ಕೆರೆ ಗೇಟ್‌ಗೆ ಬೈಕ್ ಡಿಕ್ಕಿ: ಯುವಕ ಸಾವು
ಅಪಘಾತದ ರಭಸಕ್ಕೆ ಹೆಲ್ಮೆಟ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಯುವಕನ ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಯೇ ಈ ದುರ್ಘಟನೆಗೆ ಕಾರಣ ಎಂದು ಪೊಲೀಸರು ತನಿಖೆಯಲ್ಲಿ ತಿಳಿಸಿದ್ದಾರೆ.
ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದ ಅಪಘಾತದಲ್ಲಿ ರಂಜಿತ್ (26) ಎಂಬುವವರು ಮೃತಪಟ್ಟಿದ್ದಾರೆ. ಬ್ಯಾಡರಹಳ್ಳಿಯಿಂದ ಚಿಕ್ಕಬಸ್ತಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಚಿಕ್ಕಬಸ್ತಿ ಕೆರೆಯ ಪ್ರವೇಶದ್ವಾರದ ಕಬ್ಬಿಣದ ಗೇಟ್‌ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ತಲೆಗೆ ಗಂಭೀರ ಪೆಟ್ಟಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಂಜಿತ್ ಹೆಲ್ಮೆಟ್ ಧರಿಸಿದ್ದರೂ ಸಹ, ಅಪಘಾತದ ರಭಸಕ್ಕೆ ಹೆಲ್ಮೆಟ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಯುವಕನ ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಯೇ ಈ ದುರ್ಘಟನೆಗೆ ಕಾರಣ ಎಂದು ಪೊಲೀಸರು ತನಿಖೆಯಲ್ಲಿ ತಿಳಿಸಿದ್ದಾರೆ.
ವೇಗದ ಚಾಲನೆಗೆ ಸೆಕ್ಯೂರಿಟಿ ಸಿಬ್ಬಂದಿ ಬಲಿ
ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗಲೂರು ಬಳಿಯ ಕೆಐಎಡಿಬಿ ಪ್ರದೇಶದಲ್ಲಿ ನಡೆದ ಮತ್ತೊಂದು ಬೈಕ್ ಅಪಘಾತದಲ್ಲಿ ಸೆಕ್ಯೂರಿಟಿ ಕಂಪನಿ ಉದ್ಯೋಗಿಯಾಗಿದ್ದ ಸೂರ್ಯಕುಮಾರ್ (29) ಮೃತಪಟ್ಟಿದ್ದಾರೆ. ಈ ಅಪಘಾತಕ್ಕೂ ಅತಿಯಾದ ವೇಗದ ಚಾಲನೆಯೇ ಕಾರಣ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಎರಡೂ ಘಟನೆಗಳ ಕುರಿತು ಆಯಾ ವ್ಯಾಪ್ತಿಯ ಸಂಚಾರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.