Biometric Attendance: ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಮೊಬೈಲ್​ನಲ್ಲೇ ಹಾಜರಾತಿ ಹಾಕಲು ಅವಕಾಶ
x

ಗ್ರಾಮ ಪಂಚಾಯತ್‌ 

Biometric Attendance: ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಮೊಬೈಲ್​ನಲ್ಲೇ ಹಾಜರಾತಿ ಹಾಕಲು ಅವಕಾಶ

ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌, ಸ್ವಚ್ಛತಾಗಾರರು, ನೀರುಗಂಟಿಗಳು ಪ್ರತಿದಿನ ಪಂಚತಂತ್ರ 2.0 ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು.


ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳಿಗೆ ಇನ್ನು ಮುಂದೆ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌, ಸ್ವಚ್ಛತಾಗಾರರು, ನೀರುಗಂಟಿಗಳು ಪ್ರತಿದಿನ 'ಪಂಚತಂತ್ರ 2.೦' ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು ಹಾಗೂ ಪ್ರತಿ ವೇತನವನ್ನು ಬಯೋಮೆಟ್ರಿಕ್ ಹಾಜರಾತಿ ಆಧಾರದ ಮೇಲೆ ಪಾವತಿಸುವಂತೆ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ಕರವಸೂಲಿಗಾರರು, ಸ್ವಚ್ಛತಾಗಾರರು ಮತ್ತು ನೀರುಗಂಟಿಗಳ ಕರ್ತವ್ಯವು ಕಚೇರಿಯಿಂದ ಹೊರಕ್ಕೆ ಇರುವುದರಿಂದ ನಿಗದಿತ ಸಮಯದೊಳಗೆ ಕಚೇರಿಗೆ ಹಾಜರಾಗಿ ಪಂಚತಂತ್ರ 20 ತಂತ್ರಾಂಶದಲ್ಲಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವುದು ಸಾಧ್ಯವಾಗುವುದಿಲ್ಲ. ಹಾಗಾಗಿ ಇವರಿಗೆ 'ಪಂಚತಂತ್ರ 2.೦' ಮೊಬೈಲ್ ಆ್ಯಪ್ ಮೂಲಕ ಇ-ಹಾಜರಾತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೂ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಲು ಹಾಗೂ ವೇತನವನ್ನು ಕಡ್ಡಾಯವಾಗಿ ಇ- ಹಾಜರಾತಿಯ ಆಧಾರದ ಮೇಲೆ ಪಾವತಿಸಲು ಕ್ರಮ ವಹಿಸುವಂತೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿದೆ.

Read More
Next Story