
ಯಲಹಂಕ ಹಳೆ ನಗರ, ಕೆಂಪೇಗೌಡ ವಾರ್ಡ್ ನಂ.01 ರಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು
ರಸ್ತೆ ಗುಂಡಿ ಸಮಸ್ಯೆ| 224 ಕ್ಷೇತ್ರದಲ್ಲಿ ರಸ್ತೆ ಗುಂಡಿ ಮುಚ್ಚುವ ಮೂಲಕ ಬಿಜೆಪಿ ವಿನೂತನ ಪ್ರತಿಭಟನೆ
ಬೆಂಗಳೂರಿನ ಯಲಹಂಕ ಹಳೇ ನಗರ, ಕೆಂಪೇಗೌಡ ವಾರ್ಡ್ ನಂ. 1ರಲ್ಲಿ ಸ್ಥಳೀಯ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ, ಕಾರ್ಯಕರ್ತರು ರಸ್ತೆ ಗುಂಡಿಗಳಿಗೆ ಕಲ್ಲುಮಣ್ಣು ತುಂಬಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ರಸ್ತೆ ಗುಂಡಿಗಳ ಅವಾಂತರದಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ರಾಜ್ಯದಾದ್ಯಂತ ರಸ್ತೆ ತಡೆದು 'ಗುಂಡಿ ಮುಚ್ಚುವ' ವಿನೂತನ ಪ್ರತಿಭಟನೆ ನಡೆಸಿದರು.
ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ರಸ್ತೆಗಳನ್ನು ತಕ್ಷಣವೇ ದುರಸ್ತಿ ಮಾಡಿಸುವಂತೆ ಒತ್ತಾಯಿಸಿದರು.
ಬೆಂಗಳೂರಿನ ಯಲಹಂಕ ಹಳೇ ನಗರ, ಕೆಂಪೇಗೌಡ ವಾರ್ಡ್ ನಂ. 1ರಲ್ಲಿ ಸ್ಥಳೀಯ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಈ ವೇಳೆ, ಕಾರ್ಯಕರ್ತರು ರಸ್ತೆ ಗುಂಡಿಗಳಿಗೆ ಕಲ್ಲುಮಣ್ಣು ತುಂಬಿ ಸರಿಪಡಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
224 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆ
ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಸ್ಥಳೀಯರ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು, ಶಿವಮೊಗ್ಗ, ವಿಜಯಪುರ, ಕಲಬುರಗಿ ಸೇರಿದಂತೆ ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನಾಕಾರರು ರಸ್ತೆಗಿಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಇತ್ತೀಚೆಗೆ ಬೆಂಗಳೂರಿನ ರಸ್ತೆ ಗುಂಡಿ ಬ್ಲಾಕ್‌ಬಕ್ ಸಿಇಒ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಮೂಲಸೌಕರ್ಯ ಹದಗೆಡುತ್ತಿದೆ. ಬೆಂಗಳೂರಿನ ಹೊರವರ್ತುಲ ರಸ್ತೆಯ ಬೆಳ್ಳಂದೂರಿನಲ್ಲಿ ನಮ್ಮ ಕಚೇರಿಯಿದೆ. ಗುಂಡಿ ಬಿದ್ದ ರಸ್ತೆಗಳು, ವಿಪರೀತ ದೂಳಿನಿಂದಾಗಿ ಕಚೇರಿಗೆ ಬರಲು ಸಹೋದ್ಯೋಗಿಗಳು ನಿತ್ಯ ಒಂದೂವರೆ ಗಂಟೆಗೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಕಂಪನಿಯನ್ನು ಇಲ್ಲಿಂದ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಐಟಿ ದಿಗ್ಗಜರು ಕಳವಳ ವ್ಯಕ್ತಪಡಿಸಿ, ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ಸರಿಪಡಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು.
ಈ ನಡುವೆ ರಸ್ತೆ ಗುಂಡಿ ಸಮಸ್ಯೆಗೆ ಮುಕ್ತಿ ನೀಡಲು ಸರ್ಕಾರ ಈಗಾಗಲೇ ಗ್ರೇಟರ್ ಬೆಂಗಳೂರು ಅಧಿಕಾರಿಗಳಿಗೆ ಗಡುವು ನೀಡಿದೆ. ಆದರೆ, ಈ ಮಧ್ಯೆ ಬುಧವಾರ ರಸ್ತೆ ತಡೆ ಮೂಲಕ ಬಿಜೆಪಿ ಪ್ರತಿಭಟನೆ ನಡೆಸಿದೆ.
ಬೆಂಗಳೂರು ಮಾತ್ರವಲ್ಲ, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ರಸ್ತೆಗುಂಡಿ ಸಮಸ್ಯೆ ಇದೆ. ಹೀಗಾಗಿ ಸರ್ಕಾರದ ವಿರುದ್ದ, ಭ್ರಷ್ಟಾಚಾರದ ವಿರುದ್ಧ ಒಂದು ಗಂಟೆ ಕಾಲ ರಸ್ತೆ ತಡೆ ಮೂಲಕ ಪ್ರತಿಭಟನೆ ಮಾಡಲಾಗುತ್ತದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಈ ಹೋರಾಟ ನಡೆಯುತ್ತಿದೆ. ಭ್ರಷ್ಟಾಚಾರದಲ್ಲಿ ನಿರತವಾಗಿರುವ ಸರ್ಕಾರ ಮತ್ತು ಅಭಿವೃದ್ಧಿ ಮರೆತ, ರಸ್ತೆ ಗುಂಡಿ ಮುಚ್ಚದ ಕಾಂಗ್ರೆಸ್ ಸರ್ಕಾರದ ವಿರುದ್ಧ 'ಗುಂಡಿ ಮುಚ್ಚುವ' ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.