BJP-JDS protest demanding recognition of irrigation projects in North Karnataka
x

ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಹಾಗೂ ಜೆಡಿಎಸ್‌ ಶಾಸಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಮನ್ನಣೆ ನೀಡಲು ಒತ್ತಾಯಿಸಿ ಬಿಜೆಪಿ - ಜೆಡಿಎಸ್ ಪ್ರತಿಭಟನೆ

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.


ರಸಗೊಬ್ಬರ ಕೊರತೆಯಿಂದ ರಾಜ್ಯದಲ್ಲಿ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೂ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.

ಸೋಮವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ. ಈ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಬಿಜೆಪಿ ಹಾಗೂ ಜೆಡಿಎಸ್‌ ಶಾಸಕರು ಹೋರಾಟ ಮಾಡಿದ್ದೇವೆ ಎಂದರು.

ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದರು ಎಂದು ಟೀಕಿಸಿದರು.

Read More
Next Story