Milk Price Hike| ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಸಿಎಂ
x

Milk Price Hike| ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಸಿಎಂ


"ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. "ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ."

ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, "ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು ಏನಾದರೂ ವಿವಾದ ಮಾಡಲಿ, ಪರವಾಗಿಲ್ಲ. ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು. ರೈತರು ತಮ್ಮ ಹಸುಗಳನ್ನು ಮಾರಿಕೊಳ್ಳುವ ದುಸ್ಥಿತಿಯಲ್ಲಿ ಇದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಎಷ್ಟಿದೆ ಎಂದು ತಿಳಿದು, ಆಮೇಲೆ ಮಾತಾಡಲಿ. ರೈತರನ್ನು ಬದುಕಿಸುವ ಕೆಲಸ ಮಾಡಲಿ" ಎಂದು ತಿರುಗೇಟು ನೀಡಿದರು.

Read More
Next Story