ಜಾತಿ ಗಣತಿ: ತೆಲಂಗಾಣಕ್ಕೆ ಅಭಿನಂದಿಸಿ ಸಿದ್ದರಾಮಯ್ಯಗೆ ಮತ್ತೆ ಒತ್ತಡ ತಂದ ಬಿ.ಕೆ. ಹರಿಪ್ರಸಾದ್
x
ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್

ಜಾತಿ ಗಣತಿ: ತೆಲಂಗಾಣಕ್ಕೆ ಅಭಿನಂದಿಸಿ ಸಿದ್ದರಾಮಯ್ಯಗೆ ಮತ್ತೆ ಒತ್ತಡ ತಂದ ಬಿ.ಕೆ. ಹರಿಪ್ರಸಾದ್

ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಜನ ಗಣತಿ) ವರದಿಯನ್ನು ಜಾರಿ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಹರಿಪ್ರಸಾದ್ ಅಭಿನಂಧಿಸಿದ್ದಾರೆ.


ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಜನ ಗಣತಿ) ವರದಿಯನ್ನು ಜಾರಿ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಹರಿಪ್ರಸಾದ್ ಅಭಿನಂಧಿಸಿದ್ದಾರೆ.

ಶಿಕ್ಷಣ, ಉದ್ಯೋಗ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲು ಪ್ರಮಾಣವನ್ನು ಹಾಲಿ ಇರುವ ಶೇ. 23ರಿಂದ ಶೇ. 42ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ತೆಲಂಗಾಣ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದೆ. ತೆಲಂಗಾಣ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿರುವ ಹರಿಪ್ರಸಾದ್ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಅಭಿನಂದಿಸಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಹರಿಪ್ರಸಾದ್ ವಿವರಿಸಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ನಡೆಸಿದ ಜಾತಿ ಸಮೀಕ್ಷೆ ಕಾರಣಕ್ಕಾಗಿ ಅದರನ್ವಯ ಜನಸಂಖ್ಯಾವಾರು ಮೀಸಲು ಹೆಚ್ಚಳಕ್ಕೆ ಸಹಕಾರಿಯಾಗಿದ್ದು, ಇದು ನಮ್ಮ ರಾಜ್ಯಕ್ಕೂ ಮಾದರಿಯಾಗಬೇಬೇಕಿದೆ. ನಮ್ಮ ರಾಜ್ಯದಲ್ಲಿ ಈಗಾಗಲೇ ಸಿದ್ದಪಡಿಸಿರುವ ಹಿಂದುಳಿದವರ ಸಾಮಾಜಿಕ, ಆರ್ಥಿಕ ಸಮಿಕ್ಷೆಯ ಆಯೋಗದ ವರದಿ ಇದೆ.

ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯ ಘೋಷಣೆಯಂತೆ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಿಲುವಿನಂತೆ ಆಯೋಗದ ವರದಿಯನ್ನು ಜಾರಿ ಮಾಡಿ, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹರಿಪ್ರಸಾದ್ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ.ಎಸ್. ದ್ವಾರಕಾನಾಥ್ ಸೇರಿದಂತೆ ಹಲವು ನಾಯಕರು ಈಗಾಗಲೇ ಜಾತಿ ಜನ ಗಣತಿ ವದರಿಯನ್ನು ಜಾರಿಗೆ ತರಲು ಒತ್ತಾಯಿಸಿದ್ದಾರೆ.

ಭಾರತದಲ್ಲಿ ಜಾತಿಗಳು ವೃತ್ತಿಪರವಾಗಿವೆ. ಮುಸ್ಲಿಂ ಹಾಗೂ ಕ್ರೈಸ್ತಸಮುದಾಯಗಳಲ್ಲಿಯೂ ಜಾತಿಗಳಿವೆ. ಹೀಗಾಗಿ ಬ್ರಿಟಿಷರ ಆಡಳಿತದಲ್ಲಿಯೇ ಜಾತಿವಾರು ಸಮೀಕ್ಷೆಯನ್ನು 1891 ರಲ್ಲಿ ಆರಂಭಿಸಿ 1931 ವರೆಗೆ ಪ್ರತಿ 10 ವರ್ಷಕ್ಕೊಮ್ಮೆ ಜಾತಿವಾರು ಸಮೀಕ್ಷೆಯನ್ನು ಮಾಡಲಾಗುತ್ತಿತ್ತು. ನಂತರ ಜಾತಿವಾರು ಸಮೀಕ್ಷೆ ರದ್ದುಗೊಂಡಿತ್ತು. ಭಾರತ ಸ್ವಾತಂತ್ರ್ಯ ಬಳಿಕ ಈವರೆಗೆ ಜಾತಿವಾರು ಸಮೀಕ್ಷೆ ನಡೆದಿರಲ್ಲ.

ಆದರೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡಲು ಜಾತಿ ಜನ ಗಣತಿಯನ್ನು ಮಾಡಲು ಸಿದ್ದರಾಮಯ್ಯ ಅವರು ಮೊದಲ ಸಲ ಮುಖ್ಯಮಂತ್ರಿಯಾಗಿದ್ದಾಗ ಹಿಂದುಳಿದ ವರ್ಗಗಗಳ ಆಯೋಗಕ್ಕೆ ಆದೇಶ ಮಾಡಿದ್ದರು. ಅದರಂತೆ ಸಮಿಕ್ಷೇಯನ್ನು ಆಯೋಗ ಮಾಡಿತ್ತು. ಅದರಂತೆ ಆಯೋಗದ ಅಧ್ಯಕ್ಷರಾಗಿದ್ದ ಎಚ್. ಕಾಂತರಾಜು ಆಯೋಗ ಸಮೀಕ್ಷೆ ನಡೆಸಿ ವರದಿಯನ್ನು ಸಿದ್ದಪಡಿಸಿತ್ತು. ನಂತರ ಜಯಪ್ರಕಾಶ್ ಹೆಗ್ಡೆ ಅವರು ಹಿಂದುಳಿದ ವರ್ಗಗಗಳ ಆಯೋಗದ ಅಧ್ಯಕ್ಷರಾಗಿದ್ದಾಗ 2024ರ ಫೆಬ್ರವರಿಯಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದರು. ಆದರೆ ಜಾತಿ ಜನ ಗಣತಿ ವರದಿಯನ್ನು ಅಂಗೀಕಾರ ಮಾಡದಂತೆ ಕಾಂಗ್ರೆಸ್ ಪಕ್ಷದಲ್ಲಿನ ಪ್ರಬಲ ಜಾತಿಯ ನಾಯಕರೂ ಸೇರಿದಂತೆ ಇತರ ಪಕ್ಷಗಳಲ್ಲಿನ ಪ್ರಬಲ ಜಾತಿಯ ನಾಯಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.

ಹೀಗಾಗಿ ವರದಿ ಸಲ್ಲಿಕೆಯಾಗಿ ವರ್ಷದ ಮೇಲಾದರೂ ಸರ್ಕಾರ ಜಾತಿ ಸಮೀಕ್ಷೆಯನ್ನು ಜಾರಿಗೆ ತಂದಿಲ್ಲ. ಬಿ.ಕೆ. ಹರಿಪ್ರಸಾದ್ ಈಗಾಗಲೇ ಹಲವು ಬಾರಿ ಜಾತಿ ಜನ ಗಣತಿ ವರದಿಯನ್ನು ಜಾರಿಗೆ ತಂದು, ಅದಕ್ಕೆ ಪೂರಕವಾಗಿ ಮೀಲಸಾತಿ ಕಲ್ಪಿಸಬೇಕು ಎಂದು ಆಗ್ರಹಿಸುತ್ತಲೇ ಇದ್ದಾರೆ. ಈಗ ನೆರೆಯ ತೆಲಂಗಾಣ ರಾಜ್ಯದಲ್ಲಿ ಜಾತಿ ಜನ ಗಣತಿಗೆ ತಕ್ಕಂತೆ ಮೀಸಲಾತಿ ಹಂಚಿಕೆ ಮಾಡಲು ಅಲ್ಲಿನ ರೇವಂತ್ ರೆಡ್ಡಿ ಸರ್ಕಾರ ಮುಂದಾಗಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಈ ಬಗ್ಗೆ ಚರ್ಚೆ ನಡೆಯಲಿದೆ. ಈಗಲಾದರೂ ಸಿಎಂ ಸಿದ್ದರಾಮಯ್ಯ ತಾವೇ ಮಾಡಿಸಿದ್ದ ಸಮೀಕ್ಷಾ ವರದಿಯನ್ನು ಜಾರಿಗೆ ತರುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

Read More
Next Story