
ಪಾಕ್ ಪ್ರಜೆಗಳ ಗಡಿಪಾರಿಗೆ ದಿಟ್ಟ ಕ್ರಮ ; ಗೃಹ ಸಚಿವ ಡಾ.ಜಿ.ಪರಮೇಶ್ವರ್
ಪಹಲ್ಗಾಮ್ ದಾಳಿಯನ್ನು ಇಡೀ ದೇಶವೇ ಖಂಡಿಸಿದೆ. ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ 26 ಅಮಾಯಕರ ಜೀವ ಬಲಿಯಾಗಿದೆ. ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಕೆಲ ಮಹತ್ವದ ರಾಜತಾಂತ್ರಿಕ ತೀರ್ಮಾನಗಳನ್ನು ಕೈಗೊಂಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ನಂತರ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳುಹಿಸಲು ಕೇಂದ್ರ ಗೃಹ ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಪತ್ತೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯನ್ನು ಇಡೀ ದೇಶವೇ ಖಂಡಿಸಿದೆ. ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ 26 ಅಮಾಯಕರ ಜೀವ ಬಲಿಯಾಗಿದೆ. ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಕೆಲ ಮಹತ್ವದ ರಾಜತಾಂತ್ರಿಕ ತೀರ್ಮಾನಗಳನ್ನು ಕೈಗೊಂಡಿದೆ. ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳನ್ನು ಪಟ್ಟಿ ಮಾಡಿ ಅವರ ದೇಶಕ್ಕೆ ಕಳುಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ಎಲ್ಲಾ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಪಾಕ್ ಪ್ರಜೆಗಳ ಮಾಹಿತಿ ಸಂಗ್ರಹಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದರ ಅನ್ವಯ ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳಿಗೆ ಸೂಚಿಸಲಾಗಿದ್ದು, ಈಗಾಗಲೇ ಅಂಕಿ ಅಂಶಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ವರದಿ ಬಂದ ಕೂಡಲೇ ಪಾಕಿಸ್ತಾನ ಪ್ರಜೆಗಳನ್ನು ವಾಪಸ್ ಕಳುಹಿಸುತ್ತೇವೆ ಎಂದು ಹೇಳಿದ್ದಾರೆ.
ಮದುವೆಯಾದವರಿಗೆ ವಿನಾಯ್ತಿ
ಪಾಕಿಸ್ತಾನ ಪ್ರಜೆಗಳ ಗಡಿಪಾರು ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಲವರಿಗೆ ವಿನಾಯಿತಿ ನೀಡಿದೆ. ದೀರ್ಘಾವಧಿ ವೀಸಾ, ಮದುವೆ ಆಗಿರುವವರನ್ನು ಹೊರತುಪಡಿಸಿ ಉಳಿದೆಲ್ಲರನ್ನೂ ಹೊರಕಳುಹಿಸಲು ಸೂಚಿಸಿದೆ. ಅಲ್ಪಾವಧಿ ವೀಸಾ, ವಿದ್ಯಾರ್ಥಿ, ಪ್ರವಾಸಿಗರ ವೀಸಾ ಸೇರಿ ಇತರೆ ವೀಸಾ ಸೌಲಭ್ಯದಡಿ ಇರುವವರನ್ನು ವಾಪಸ್ಸು ಕಳುಹಿಸುತ್ತೇವೆ ಎಂದು ಹೇಳಿದ್ದಾರೆ.